ದೇಶ

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 47,638 ಕೇಸ್ ಪತ್ತೆ; ಒಟ್ಟು ಸೋಂಕಿತರ ಸಂಖ್ಯೆ 84 ಲಕ್ಷ

Manjula VN

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 47,638 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 84 ಲಕ್ಷ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದೆ. 

ಇನ್ನು ಒಂದೇ ದಿನ 670 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 1,24,985ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ. 

ಈ ನಡುವೆ ದೇಶದಲ್ಲಿ ನಿನ್ನೆ ಒಂದೇ ದಿನ 54,157 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 77,65,966ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಒಟ್ಟಾರೆ 84,11,724 ಲಕ್ಷ ಮಂದಿ ಸೋಂಕಿತರ ಪೈಕಿ ದೇಶದಲ್ಲಿನ್ನೂ 5,27,962 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12,20,711 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 11,54,29,095 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

SCROLL FOR NEXT