ಪಿಎಸ್ಎಲ್ ವಿ ಸಿ49 ಉಡಾವಣೆ 
ದೇಶ

ಇಸ್ರೋದ ಪಿಎಸ್ಎಲ್ ವಿ ಸಿ49 ಉಡಾವಣೆ ಯಶಸ್ವಿ; ಭೂ ವೀಕ್ಷಣಾ ಉಪಗ್ರಹ ಇಒಎಸ್-01 ಸೇರಿದಂತೆ 10 ಉಪಗ್ರಹಗಳು ಕಕ್ಷೆಗೆ!

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಯಶಸ್ವಿ ಉಡಾವಣೆ ಕೈಗೊಂಡಿದ್ದು, ಭೂ ವೀಕ್ಷಣಾ ಉಪಗ್ರಹ ಇಒಎಸ್-01 ಸೇರಿದಂತೆ 10 ಉಪಗ್ರಹಗಳನ್ನು ಹೊತ್ತಿದ್ದ ಪಿಎಸ್ಎಲ್ ವಿ ಸಿ49 ಯಶಸ್ವಿ ಉಡಾವಣೆಯಾಗಿದೆ.

ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಯಶಸ್ವಿ ಉಡಾವಣೆ ಕೈಗೊಂಡಿದ್ದು, ಭೂ ವೀಕ್ಷಣಾ ಉಪಗ್ರಹ ಇಒಎಸ್-01 ಸೇರಿದಂತೆ 10 ಉಪಗ್ರಹಗಳನ್ನು ಹೊತ್ತಿದ್ದ ಪಿಎಸ್ಎಲ್ ವಿ ಸಿ49 ಯಶಸ್ವಿ ಉಡಾವಣೆಯಾಗಿದೆ.

ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಉಡಾವಣಾ ಕೇಂದ್ರದಿಂದ ಇಂದು ಮಧ್ಯಾಹ್ನ ಪಿಎಸ್ಎಲ್ ವಿ ಸಿ49 ರಾಕೆಟ್ ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು. 

ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ (ಎಸ್ ಡಿಎಸ್ ಸಿ) ಎಸ್ ಆರ್ ಎಚ್ ಆರ್ ನಿಂದ 9 ಅಂತಾರಾಷ್ಟ್ರೀಯ ಗ್ರಾಹಕ ಉಪಗ್ರಹಗಳೊಂದಿಗೆ ಭಾರತದ ಧ್ರುವ ಉಪಗ್ರಹ ಉಡಾವಣಾ ವಾಹಕವು ತನ್ನ 51ನೇ ಮಿಷನ್ (ಪಿಎಸ್ ಎಲ್ ವಿ-ಸಿ49) ಇಓಎಸ್-01 ಅನ್ನು ಪ್ರಾಥಮಿಕ ಉಪಗ್ರಹವಾಗಿ  ಉಡಾವಣೆ ಮಾಡಿದೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ 2020ರ ನವೆಂಬರ್ 7ರಂದು ಉಡಾವಣೆಯನ್ನ ತಾತ್ಕಾಲಿಕವಾಗಿ 1502 Hrs IST ನಲ್ಲಿ ನಿಗದಿಮಾಡಲಾಗಿದೆ' ಎಂದು ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ. ಭಾರತದ ಪಿಎಸ್ ಎಲ್ ವಿ-ಸಿ49 ಹಯು EOS-01 ಅನ್ನ ಪ್ರಾಥಮಿಕ ಉಪಗ್ರಹವಾಗಿ  ಒಂಬತ್ತು ಅಂತಾರಾಷ್ಟ್ರೀಯ ಗ್ರಾಹಕ ಉಪಗ್ರಹಗಳೊಂದಿಗೆ ಉಡಾವಣೆ ಮಾಡಿದೆ.

ಕೊರೋನಾ ಕಾರಣದಿಂದ ಕಳೆದ ಕೆಲ ತಿಂಗಳುಗಳಿಂದ ಇಸ್ರೋದ ಅಂತರಿಕ್ಷ ಕಾರ್ಯಕ್ರಮಗಳು ಸ್ಥಗಿತವಾಗಿತ್ತು. ಇದೀಗ ಭೂ ವೀಕ್ಷಣಾ ಉಪಗ್ರಹ ಇಒಎಸ್-01ನ ಉಡಾವಣೆ ಮೂಲಕ ಮತ್ತೆ ಇಸ್ರೋ ಅಂತರಿಕ್ಷ ಕಾರ್ಯಕ್ರಮಗಳಿಗೆ ಚಾಲನೆ ದೊರೆತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ

'ನನ್ನ ಚೋಲಿ ಬಗ್ಗೆ 6 ಜನರಿಂದ ಪ್ಯಾನಲ್ ಡಿಸ್ಕಷನ್, ಸಂಸ್ಕೃತಿ ಬಟ್ಟೆಯಲ್ಲ, ಹೃದಯದಲ್ಲಿದೆ'; ರಾಖಿ ಜಾಹೀರಾತು ವಿವಾದ ಬಗ್ಗೆ ಮೌನ ಮುರಿದ ನಟಿ Kriti Sanon

ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಕೊನೆಗೂ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ