ಮುಂಬೈ ವಿಮಾನ ನಿಲ್ದಾಣದಲ್ಲಿ ಇಥಿಯೋಪಿಯಾ ಏರ್ ಲೈನ್ಸ್ ವಿಮಾನ ತುರ್ತು ಭೂಸ್ಪರ್ಶ
ಸೌದಿ ಅರೇಬಿಯಾದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಇಥಿಯೋಪಿಯಾ ಏರ್ ಲೈನ್ಸ್ ನ ಸರಕು ವಿಮಾನ ತಾಂತ್ರಿಕ ದೋಷದಿಂದಾಗಿ ಮುಂಬೈನಲ್ಲೇ ತುರ್ತಾಗಿ ಇಳಿದಿರುವ ಘಟನೆ ವರದಿಯಾಗಿದೆ.
ಮುಂಬೈ: ಸೌದಿ ಅರೇಬಿಯಾದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಇಥಿಯೋಪಿಯಾ ಏರ್ ಲೈನ್ಸ್ ನ ಸರಕು ವಿಮಾನ ತಾಂತ್ರಿಕ ದೋಷದಿಂದಾಗಿ ಮುಂಬೈನಲ್ಲೇ ತುರ್ತಾಗಿ ಇಳಿದಿರುವ ಘಟನೆ ವರದಿಯಾಗಿದೆ.
ಸರಕು ವಿಮಾನ ಇಟಿ -690ದಲ್ಲಿ ಹೈಡ್ರಾಲಿಕ್ ಸೋರಿಕೆ ಹಿನ್ನೆಲೆಯಲ್ಲಿ ಮುಂಬೈಗೆ ಮಾರ್ಗ ಬದಲಿಸಲಾಯಿತು. ಇದರಿಂದ ವಿಮಾನ ಸುರಕ್ಷಿತವಾಗಿ ಇಳಿಯಲು ಸಾಧ್ಯವಾಯಿತು ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.
ವಿಮಾನದಲ್ಲಿ ಎಂಟು ಸಿಬ್ಬಂದಿ ಇದ್ದರು. ಮುಂಬೈ ವಿಮಾನ ನಿಲ್ದಾಣ ಸಂಪೂರ್ಣ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದರಿಂದ ಯಾವುದೇ ಸಾವು-ನೋವು ಸಂಭವಿಸಿಲ್ಲ. ವಿಮಾನ ನಿಲ್ದಾಣ ಮತ್ತು ವೈದ್ಯಕೀಯ ತಂಡಗಳೊಂದಿಗೆ ಮುಂಬೈ ಅಗ್ನಿಶಾಮಕ ದಳದ ಆಂಬುಲೆನ್ಸ್‌ಗಳು ವಿಮಾನದ ಸುತ್ತ ನೆರೆದಿದ್ದವು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.