ಸಂಗ್ರಹ ಚಿತ್ರ 
ದೇಶ

ಬಿಹಾರ ಚುನಾವಣೆ: ಕಾಂಗ್ರೆಸ್ ನಿಂದ ವೀಕ್ಷಕರ ನೇಮಕ, ಗರಿಗೆದರಿದ ರಾಜಕೀಯ ಚಟುವಟಿಕೆ!

ಬಿಹಾರ ವಿಧಾನಸಭೆ ಚುನಾವಣೆಯ ಅಂತಿಮ ಹಂತದ ಮತದಾನ ಮುಕ್ತಾಯವಾಗಿ ಚುನಾವಣೋತ್ತರ ಸಮೀಕ್ಷೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗುವ ಕುರಿತ ಮಾಹಿತಿ ದೊರೆತ ಬೆನ್ನಲ್ಲೇ ಸಂಭಾವ್ಯ ರಾಜಕೀಯ ಬೆಳವಣಿಗೆಗಳಿಗೆ ಸಜ್ಜಾಗಿರುವ ಕಾಂಗ್ರೆಸ್ ಬಿಹಾರಕ್ಕೆ ವೀಕ್ಷಕರನ್ನು ನೇಮಕ ಮಾಡಿದೆ.

ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆಯ ಅಂತಿಮ ಹಂತದ ಮತದಾನ ಮುಕ್ತಾಯವಾಗಿ ಚುನಾವಣೋತ್ತರ ಸಮೀಕ್ಷೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗುವ ಕುರಿತ ಮಾಹಿತಿ ದೊರೆತ ಬೆನ್ನಲ್ಲೇ ಸಂಭಾವ್ಯ ರಾಜಕೀಯ ಬೆಳವಣಿಗೆಗಳಿಗೆ ಸಜ್ಜಾಗಿರುವ ಕಾಂಗ್ರೆಸ್ ಬಿಹಾರಕ್ಕೆ ವೀಕ್ಷಕರನ್ನು ನೇಮಕ ಮಾಡಿದೆ.

ಹೌದು.. ಬಿಹಾರ ವಿಧಾನಸಭೆ ಚುನಾವಣೆಯ ಅಂತಿಮ ಹಂತದ ಮತದಾನ ಮುಕ್ತಾಯವಾಗಿದೆ. ಈಗಾಗಲೇ ಚುನಾವಣೋತ್ತರ ಸಮೀಕ್ಷೆಗಳ ವರದಿ ಪ್ರಕಟಗೊಂಡಿದ್ದು, ಕಾಂಗ್ರೆಸ್ ನೇತೃತ್ವದ ಮಹಾಘಟ್ ಬಂಧನ್ ಗೆ ಬಿಹಾರದಲ್ಲಿ ಅಧಿಕಾರದ ಗದ್ದುಗೆ ಏರುವ ಸಾಧ್ಯತೆ ಇದೆ ಎಂದು ಕೆಲ ಸಮೀಕ್ಷೆಗಳು ಹೇಳಿದ್ದು,  ಮತ್ತೆ ಕೆಲ ಸಮೀಕ್ಷೆಗಳು ಬಿಹಾರದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗುವ ಕುರಿತು ಸಮೀಕ್ಷೆ ಪ್ರಕಟಿಸಿವೆ. ಆದರೆ ಯಾವುದೇ ಸಮೀಕ್ಷೆಯಲ್ಲೂ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ದೊರೆಯುವ ಕುರಿತು ಮಾಹಿತಿ ಇಲ್ಲ.

ಇದೇ ಕಾರಣಕ್ಕೆ ಇದೀಗ ಬಿಹಾರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಶಾಸಕರ ಕುದುರೆ ವ್ಯಾಪರಕ್ಕೆ ವೇದಿಕೆ ಅಣಿಯಾಗುತ್ತಿದೆ. ತಮ್ಮ ಶಾಸಕರನ್ನು ತಮ್ಮ ತಮ್ಮ ಹಿಡಿತದಲ್ಲಿಟ್ಟುಕೊಂಡು ಬೇರೆ ಪಕ್ಷದ ಶಾಸಕರಿಗೆ ಗಾಳ ಹಾಕಲು ರಾಜಕೀಯ ಪಕ್ಷಗಳು ಮುಂದಾಗಿವೆ. ಆ ಮೂಲಕ ಬಿಹಾರದಲ್ಲಿ ಹೇಗೆ  ಸರ್ಕಾರ ರಚನೆ ಮಾಡಬೇಕು ಎಂದು ರಾಜಕೀಯ ಪಕ್ಷಗಳು ಯೋಜನೆ ರೂಪಿಸುತ್ತಿವೆ. ಇದರ ಮೊದಲ ಹಂತವಾಗಿ ಕಾಂಗ್ರೆಸ್ ಪಕ್ಷ ಬಿಹಾರಕ್ಕೆ ತನ್ನ ವೀಕ್ಷಕರನ್ನು ನೇಮಕ ಮಾಡಿದೆ.

ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಅವರು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ರಂದೀಪ್ ಸಿಂಗ್ ಸುರ್ಜೆವಾಲಾ ಮತ್ತು ಅವಿನಾಶ್ ಪಾಂಡೆ ಅವರನ್ನು ಬಿಹಾರದ ಕಾಂಗ್ರೆಸ್ ಪಕ್ಷದ ವೀಕ್ಷಕರನ್ನಾಗಿ ನೇಮಕ ಮಾಡಿದ್ದಾರೆ. ಇಂದು ಮಧ್ಯಾಹ್ನದ ವೇಳೆಗೆ ಇಬ್ಬರೂ ನಾಯಕರು ಪಾಟ್ನಾಗೆ ತೆರಳುವ ಸಾಧ್ಯತೆ  ಇದ್ದು, ಅಲ್ಲಿನ ರಾಜಕೀಯ ಬೆಳವಣಿಗೆಗಳ ಕುರಿತು ಗಮನ ಕೇಂದ್ರೀಕರಿಸಲಿದ್ದಾರೆ. ಅಂತೆಯೇ ಸರ್ಕಾರ ರಚನೆ ಮತ್ತು ಇತರೆ ರಾಜಕೀಯ ಬೆಳವಣಿಗೆಗಳ ಕುರಿತು ಕೇಂದ್ರ ನಾಯಕರಿಗೆ ನಿರಂತರ ವರದಿ ನೀಡಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT