ದೇಶ

ಕೋವಿಡ್-19: 24 ಗಂಟೆಗಳಲ್ಲಿ ದೇಶಾದ್ಯಂತ 45,674 ಹೊಸ ಪ್ರಕರಣಗಳು ದಾಖಲು, 85 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ

Srinivasamurthy VN

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 45,674 ಹೊಸ ಸೋಂಕು ಪ್ರಕರಣಗಳು ದಾಖಲಾಗುವುದರೊಂದಿಗೆ ಭಾರತದ ಒಟ್ಟಾರೆ ಸೋಂಕಿತರ ಸಂಖ್ಯೆ 85 ಲಕ್ಷ ಗಡಿ ದಾಟಿದೆ.

ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು ಕಳೆದ 24 ಗಂಟೆಗಳ ಅವಧಿಲ್ಲಿ ದೇಶಾದ್ಯಂತ 45,674 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ. ಆ ಮೂಲಕ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 85,07,754ಕ್ಕೆ ಏರಿಕೆಯಾಗಿದೆ. ಅಂತೆಯೇ ನಿನ್ನೆ ದೇಶಾದ್ಯಂತ 559 ಸೋಂಕಿತರು ಸಾವನ್ನಪ್ಪಿದ್ದು, ಆ  ಮೂಲಕ ದೇಶದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,26,121ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ 49,082 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಒಟ್ಟಾರೆ ಗುಣಮುಖರ ಸಂಖ್ಯೆ 78,68,968ಕ್ಕೆ ಏರಿಕೆಯಾಗಿದೆ. ಅಂತೆಯೇ ದೇಶದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 5,12,665 ಕ್ಕೆ ಕುಸಿದಿದೆ. 

ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 11,94,487 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಆ ಮೂಲಕ ದೇಶದ ಒಟ್ಟಾರೆ ಕೋವಿಡ್ ಪರೀಕ್ಷೆಗಳ ಸಂಖ್ಯೆ 11,77,36,791 ಕ್ಕೆ ಏರಿಕೆಯಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. 

SCROLL FOR NEXT