ಮಣಎಣಿಕೆಯ ಕೊಠಡಿಯ ಬಾಗಿಲು ತೆರೆಯುತ್ತಿರುವ ಅಧಿಕಾರಿಗಳು 
ದೇಶ

ಬಿಹಾರ ವಿಧಾನಸಭಾ ಚುನಾವಣೆ: ಮತಎಣಿಕೆ ಪ್ರಕ್ರಿಯೆ ಆರಂಭ, ಹೊರಬೀಳಲಿದೆ 3,755 ಅಭ್ಯರ್ಥಿಗಳ ಭವಿಷ್ಯ 

ಭಾರೀ ಕುತೂಹಲ ಕೆರಳಸಿರುವ ಬಿಹಾರ ವಿಧಾನಸಬೆ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ಮಂಗಳವಾರ ಆರಂಭವಾಗಿದೆ. ಬೆಳಿಗ್ಗೆ 8 ಗಂಟೆಗೆ ಮತಎಣಿಕೆ ಪ್ರಾರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ ಸ್ಪಷ್ಟ ಚಿತ್ರಣಗಳು ದೊರೆಯುವ ನಿರೀಕ್ಷೆಗಳಿವೆ. 

ಪಾಟ್ನ: ಭಾರೀ ಕುತೂಹಲ ಕೆರಳಸಿರುವ ಬಿಹಾರ ವಿಧಾನಸಬೆ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ಮಂಗಳವಾರ ಆರಂಭವಾಗಿದೆ. ಬೆಳಿಗ್ಗೆ 8 ಗಂಟೆಗೆ ಮತಎಣಿಕೆ ಪ್ರಾರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ ಸ್ಪಷ್ಟ ಚಿತ್ರಣಗಳು ದೊರೆಯುವ ನಿರೀಕ್ಷೆಗಳಿವೆ. 

ಬಿಹಾರರದಲ್ಲಿ ಮೂರು ಹಂತದಲ್ಲಿ ಚುನಾವಣೆ ನಡೆದಿದ್ದು ಶೇ.56ರಷ್ಟು ಮತದಾನವಾಗಿದdog, 3,755 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. 243 ಸದಸ್ಯ ಬಲದ ಬಿಹಾರ ವಿಧಾನಸಭೆಯಲ್ಲಿ ಬಹುಮತಕ್ಕೆ 122 ಸೀಟುಗಳ ಅಗತ್ಯವಿದೆ. 

ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಎನ್'ಡಿಎ ಮೈತ್ರಿಕೂಟ ಹಾಗೂ ತೇಜಸ್ವಿ ಯಾದವ್ ನೇತೃತ್ವದ ಆರ್'ಜೆಡಿ-ಕಾಂಗ್ರೆಸ್ ಹಾಗೂ ಇತರ ಮೂರು ಪಕ್ಷಗಳನ್ನು ಒಳಗೊಂಡ ಮಹಾಗಠ ಬಂಧನ್ ಮಧ್ಯೇ ನೇರ ಹಣಾಹಣಣಿ ಏರ್ಪಟ್ಟಿದೆ. ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಮಹಾಗಠಬಂಧನ್ ಬಹುಮತ ಸಾಧಿಸಲಿದೆ ಎಂದು ಭವಿಷ್ಯ ನುಡಿದಿವೆ. 

ಒಂದು ವೇಳೆ, ಚುನಾವಣೋತ್ತರ ಸಮೀಕ್ಷೆಗಳು ಸುಳ್ಳಾಗಿ ಎನ್​ಡಿಎ ಮೈತ್ರಿ ಕೂಟ ಗೆದ್ದರೆ ಬಿಜೆಪಿಗೆ ಭಾರೀ ಲಾಭವಾಗಲಿದೆ. ಅದು ಪಶ್ಚಿಮ ಬಂಗಾಳದ ಚುನಾವಣೆ ಅಥವಾ ರಾಷ್ಟ್ರ ರಾಜಕಾರಣದ ದೃಷ್ಟಿಯಿಂದ ಮಾತ್ರವಲ್ಲ. ಬಿಹಾರದಲ್ಲೂ ಸದ್ಯಕ್ಕೆ ನಿತೀಶ್ ಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಿ ಕ್ರಮೇಣ ಬಿಜೆಪಿಗೆ ಮುಖ್ಯಮಂತ್ರಿ ಪಟ್ಟ ದಕ್ಕಿಸಿಕೊಳ್ಳುವ ಪ್ರಯತ್ನಗಳಾಗಲಿವೆ. ನಿತೀಶ್ ಕುಮಾರ್ ಅವರ ಜೆಡಿಯುಗಿಂತ ಬಿಜೆಪಿ ಹೆಚ್ಚು ಸೀಟು ಗೆದ್ದರೆ ಈ ಲೆಕ್ಕಾಚಾರವನ್ನು ಜಾರಿಗೊಳಿಸುವುದು ಸುಲಭವಾಗಲಿದೆ‌.

ಈ ನಡುವೆ ಮಧ್ಯಪ್ರದೇಶದ 28 ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ ಏರ್ಪಟ್ಟಿದ್ದು, ಮುಖ್ಯಮಂತ್ರಿ ಶಿವರಾಜ್ ಚೌಹಾಣ್ ಅವರ ಭವಿಷ್ಯವನ್ನೂ ಫಲಿತಾಂಶ ನಿರ್ಧರಿಸಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT