ದೇಶ

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 38,074 ಹೊಸ ಪ್ರಕರಣ, 86 ಲಕ್ಷ ಗಡಿಯತ್ತ ಸೋಂಕಿತರ ಸಂಖ್ಯೆ

Srinivasamurthy VN

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 38,074 ಹೊಸ ಸೋಂಕು ಪ್ರಕರಣಗಳು ದಾಖಲಾಗುವುದರೊಂದಿಗೆ ಭಾರತದ ಒಟ್ಟಾರೆ ಸೋಂಕಿತರ ಸಂಖ್ಯೆ 86 ಲಕ್ಷ ಗಡಿಯತ್ತ ಸಾಗಿದೆ.

ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು ಕಳೆದ 24 ಗಂಟೆಗಳ ಅವಧಿಲ್ಲಿ ದೇಶಾದ್ಯಂತ 38,074 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ. ಆ ಮೂಲಕ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 85,91,731ಕ್ಕೆ ಏರಿಕೆಯಾಗಿದೆ. ಅಂತೆಯೇ ನಿನ್ನೆ ದೇಶಾದ್ಯಂತ 448 ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ದೇಶದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,27,059ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ 42,033 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಒಟ್ಟಾರೆ ಗುಣಮುಖರ ಸಂಖ್ಯೆ 79,59,406ಕ್ಕೆ ಏರಿಕೆಯಾಗಿದೆ. ಅಂತೆಯೇ ದೇಶದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 5,05,265 ಕ್ಕೆ ಕುಸಿದಿದೆ. 

SCROLL FOR NEXT