ದೇಶ

ಗುಜರಾತ್ ನಲ್ಲಿ ನವೆಂಬರ್ 23ರಿಂದ ಹೈಸ್ಕೂಲ್, ಕಾಲೇಜ್ ಗಳು ಪುನರಾರಂಭ

Lingaraj Badiger

ಅಹಮದಾಬಾದ್: ಗುಜರಾತ್ ನಲ್ಲಿ ದೀಪಾವಳಿ ರಜೆಯ ನಂತರ ನವೆಂಬರ್ 23 ರಿಂದ ಪ್ರೌಢ ಶಾಲೆಗಳು ಮತ್ತು ಕಾಲೇಜುಗಳನ್ನು ಪುನರಾರಂಭಿಸಲು ಸರ್ಕಾರ ನಿರ್ಧರಿಸಿದೆ ಎಂದು ಗುಜರಾತ್ ಶಿಕ್ಷಣ ಸಚಿವ ಭೂಪೇಂದ್ರಸಿಂಹ ಚುಡಾಸಮಾ ಅವರು ಬುಧವಾರ ತಿಳಿಸಿದ್ದಾರೆ.

ಕೊರೋನಾ ವೈರಸ್ ಹರಡುವುದನ್ನು ತಡೆವುದಕ್ಕಾಗಿ ದೇಶಾದ್ಯಂತ ಜಾರಿಗೊಳಿಸಲಾದ ಲಾಕ್‌ಡೌನ್ ನಿಂದಾಗಿ ಕಳೆದ ಮಾರ್ಚ್‌ನಿಂದ ಬಂದ್ ಆಗಿರುವ ಶಾಲೆಗಳನ್ನು ಮತ್ತೆ ಆರಂಭಿಸಲಾಗುತ್ತಿದ್ದು, ನವೆಂಬರ್ 23ರಿಂದ 9ನೇ ತರಗತಿಯಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ತರಗತಿಗಳು ಆರಂಭವಾಗಲಿವೆ. ಆದರೆ ಹಾಜರಾತಿ ಕಡ್ಡಾಯವಲ್ಲ ಎಂದು ಸಚಿವರು ಸುದ್ದಿಗಾರರಿಗೆ ಹೇಳಿದ್ದಾರೆ.

1 ರಿಂದ 8ನೇ ತರಗತಿಗಳ ಪ್ರಾಥಮಿಕ ಶಾಲೆಗಳನ್ನು ಪುನರಾರಂಭಿಸುವ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

"ಕೋವಿಡ್ -19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಪ್ರೌಢ ಶಾಲೆ ಮತ್ತು ಕಾಲೇಜುಗಳನ್ನು ಮಾತ್ರ ಮತ್ತೆ ತೆರೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕೇಂದ್ರ ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳ ಪ್ರಕಾರ ಕ್ಯಾಂಪಸ್‌ಗಳು ಕಾರ್ಯನಿರ್ವಹಿಸುತ್ತವೆ. 1 ರಿಂದ 8 ನೇ ತರಗತಿಯ ಪ್ರಾಥಮಿಕ ಶಾಲೆಗಳನ್ನು ತೆರೆಯುವ ನಿರ್ಧಾರವನ್ನು ನಂತರ ತೆಗೆದುಕೊಳ್ಳಲಾಗುವುದು "ಎಂದು ಚುಡಾಸಮಾ ಹೇಳಿದರು.

SCROLL FOR NEXT