ಸಾಂದರ್ಭಿಕ ಚಿತ್ರ 
ದೇಶ

ಪಶ್ಚಿಮ ಬಂಗಾಳ: ಅಪರಿಚಿತ ದುಷ್ಕರ್ಮಿಗಳಿಂದ ಟಿಎಂಸಿ ಕಾರ್ಯಕರ್ತನ ಮೇಲೆ ಗುಂಡಿನ ದಾಳಿ, ಹತ್ಯೆ 

ಪಶ್ಚಿಮ ಬಂಗಾಳದ ಪಾಸ್ಚಿಮ್ ಬರ್ಧಮನ್ ಜಿಲ್ಲೆಯ ಅಂಡಾಲ್ ನಲ್ಲಿ ಅಪರಿಚಿತ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಟಿಎಂಸಿ ಕಾರ್ಯಕರ್ತನೊಬ್ಬ ಸಾವನ್ನಪ್ಪಿದ್ದು, ಮತ್ತಿಬ್ಬರು ಗಾಯಗೊಂಡಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಪಾಸ್ಚಿಮ್ ಬರ್ಧಮನ್ ಜಿಲ್ಲೆಯ ಅಂಡಾಲ್ ನಲ್ಲಿ ಅಪರಿಚಿತ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಟಿಎಂಸಿ ಕಾರ್ಯಕರ್ತನೊಬ್ಬ ಸಾವನ್ನಪ್ಪಿದ್ದು, ಮತ್ತಿಬ್ಬರು ಗಾಯಗೊಂಡಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಬುಧವಾರ ರಾತ್ರಿ 11 ಗಂಟೆ ಸುಮಾರಿನಲ್ಲಿ ಇಬ್ಬರು ಅಪರಿಚಿತರು ಗುಂಡಿನ ಸುರಿಮಳೆ ಸುರಿಸಿದ್ದರಿಂದ ಧರ್ಮವೀರ್ ನುನಿಯಾ ಎಂಬವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ದಾಳಿಯಲ್ಲಿ ನುನಿಯಾ ಜೊತೆಗಿದ್ದ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ದುಷ್ಕರ್ಮಿಗಳಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಘಟನೆ ಹಿಂದೆ ರಾಜಕೀಯ ಕೈವಾಡವಿದೆ ಎಂಬುದನ್ನು ಸ್ಥಳೀಯ ಟಿಎಂಸಿ ನಾಯಕರು ನಿರಾಕರಿಸಿದ್ದು, ದುಷ್ಕರ್ಮಿಗಳಿಗೆ ಶಿಕ್ಷೆಯಾಗಬೇಕೆಂದು ಒತ್ತಾಯಿಸಿದ್ದಾರೆ. 

ಕಲ್ಲಿದ್ದಲು ನಿಕ್ಷೇಪ ಹಂಚಿಕೆಯಲ್ಲಿನ ಬಣಗಳ ನಡುವಣ ಭಿನ್ನಾಭಿಪ್ರಾಯದಿಂದಾಗಿ ಈ ಹತ್ಯೆ ನಡೆದಿದೆ ಎಂದು ಬಿಜೆಪಿ ಮುಖಂಡರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT