ಭಾರತೀಯ ಸೇನಾಪಡೆಯಿಂದ ಪ್ರತಿ ದಾಳಿಯ ದೃಶ್ಯ 
ದೇಶ

ಜಮ್ಮು-ಕಾಶ್ಮೀರ: ಕದನ ವಿರಾಮ ಉಲ್ಲಂಘನೆ; ಭಾರತೀಯ ಸೇನೆ ಪ್ರತಿದಾಳಿಯಲ್ಲಿ 8 ಪಾಕ್ ಯೋಧರ ಹತ್ಯೆ; ವಿಡಿಯೋ

ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆ ( ಎಲ್ ಒಸಿಯಲ್ಲಿ) ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನದ ವಿರುದ್ಧ ಪ್ರತಿ ದಾಳಿ ನಡೆಸಿದ ಭಾರತೀಯ ಸೇನಾಪಡೆ ಎರಡು- ಮೂರು ಪಾಕ್ ಸೇನೆಯ ಎಸ್ ಎಸ್ ಜಿ ಕಮಾಂಡೋ ಸೇರಿದಂತೆ 8 ಮಂದಿ ಸೈನಿಕರನ್ನು ಹತ್ಯೆ ಮಾಡಿದೆ.

ಶ್ರೀನಗರ: ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆ ( ಎಲ್ ಒಸಿಯಲ್ಲಿ) ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನದ ವಿರುದ್ಧ ಪ್ರತಿ ದಾಳಿ ನಡೆಸಿದ ಭಾರತೀಯ ಸೇನಾಪಡೆ ಎರಡು- ಮೂರು ಪಾಕ್ ಸೇನೆಯ ಎಸ್ ಎಸ್ ಜಿ ಕಮಾಂಡೋ ಸೇರಿದಂತೆ 8 ಮಂದಿ ಸೈನಿಕರನ್ನು ಹತ್ಯೆ ಮಾಡಿದೆ.

ಪಾಕ್ ಸೇನೆಯ ಅಪಾರ ಪ್ರಮಾಣದ ಬಂಕರ್ ಗಳು, ಇಂಧನ ಡಂಪಿಂಗ್ ಮತ್ತು ಕಾರ್ಯಸ್ಥಳಗಳನ್ನು ಭಾರತೀಯ ಸೇನೆ ನಾಶಪಡಿಸಿದ್ದು, ಘಟನೆಯಲ್ಲಿ 10-12 ಪಾಕ್ ಯೋಧರು ಗಾಯಗೊಂಡಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

ಇದಕ್ಕೂ ಮುನ್ನ ನೆರೆಯ ರಾಷ್ಟ್ರದಿಂದ ಕದನ ವಿರಾಮ ಉಲ್ಲಂಘನೆ ಹಾಗೂ ಪಾಕ್ ಮೂಲದ ಉಗ್ರರ ಒಳನಸುಳುವಿಕೆ ತಡೆಯುವ ಪ್ರಯತ್ನದಲ್ಲಿ  ಪ್ರತ್ಯೇಕ ಕಡೆಗಳಲ್ಲಿ ಭಾರತದ ಇಬ್ಬರು ಯೋಧರು ಹುತಾತ್ಮರಾದರು. ಉರಿ ವಲಯದಲ್ಲಿ ಇಬ್ಬರು ಹಾಗೂ ಗುರೆಜ್ ಸೆಕ್ಟರ್ ನಲ್ಲಿ ಒಬ್ಬರು ಹುತಾತ್ಮರಾಗಿರುವುದಾಗಿ ಸೇನಾ ಮೂಲಗಳು ಮಾಹಿತಿ ನೀಡಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!

ಜುಲೈ ಕಂಟಕ: ಕಳೆದ ವರ್ಷ ಹಠಾತ್ ಬಿರುಗಾಳಿಯಿಂದ ದೋಣಿ ಮಗುಚಿ 39 ಮಂದಿ ಸಾವು; ಈ ವರ್ಷ 15 ಮಂದಿ ದುರ್ಮರಣ!