ನಿತೀಶ್ ಕುಮಾರ್ 
ದೇಶ

ಬಿಹಾರ: ರಾಜ್ಯಪಾಲರನ್ನು ಭೇಟಿ ಮಾಡಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ನಿತೀಶ್ ಕುಮಾರ್

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಶುಕ್ರವಾರ ರಾಜ್ಯಪಾಲ ಫಗು ಚೌಹಾಣ್ ಅವರನ್ನು ಭೇಟಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಅಲ್ಲದೆ ಪ್ರಸಕ್ತ ವಿಧಾನಸಭೆಯನ್ನು ವಿಸರ್ಜಿಸುವುಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದಾರೆ.

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಶುಕ್ರವಾರ ರಾಜ್ಯಪಾಲ ಫಗು ಚೌಹಾಣ್ ಅವರನ್ನು ಭೇಟಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಅಲ್ಲದೆ ಪ್ರಸಕ್ತ ವಿಧಾನಸಭೆಯನ್ನು ವಿಸರ್ಜಿಸುವುಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದಾರೆ.

ಇತ್ತೀಚಿಗೆ ನಡೆದ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಗೆಲುವು ಸಾಧಿಸಿದ್ದು, ಮತ್ತೆ ನಿತೀಶ್ ಕುಮಾರ್ ನೇತೃತ್ವದಲ್ಲಿ ಸರ್ಕಾರ ರಚನೆಯ ಸಿದ್ಧತೆಯಲ್ಲಿ ತೊಡಗಿದೆ.

ರಾಜ್ಯಪಾಲರು ನಿತೀಶ್ ಕುಮಾರ್ ರಾಜೀನಾಮೆಯನ್ನು ಅಂಗೀಕರಿಸಿದ್ದು, ನೂತನ ಸರ್ಕಾರ ರಚನೆಯಾಗುವವರೆಗೆ ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರೆಯುವಂತೆ ಸೂಚಿಸಿದ್ದಾರೆ.

ಇಂದು ನಿತೀಶ್ ಕುಮಾರ್ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ, ವಿಧಾನಸಭೆಯನ್ನು ವಿಸರ್ಜಿಸುವ ನಿರ್ಣಯ ಅಂಗೀಕರಿಸಿ, ಅದನ್ನು ರಾಜ್ಯಪಾಲರಿಗೆ ರವಾನಿಸಲಾಗಿದೆ.

ಭಾನುವಾರ ಎನ್‌ಡಿಎ ಶಾಸಕರು ಸಭೆ ಸೇರಲಿದ್ದು, ಈ ಸಭೆಯಲ್ಲಿ ಹೊಸ ಮುಖ್ಯಮಂತ್ರಿಯನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ನಿತೀಶ್ ಕುಮಾರ್ ಅವರೇ ಮತ್ತೆ ಮುಖ್ಯಮಂತ್ರಿಯಾಗುವ ಸಾಧ್ಯತೆ ದಟ್ಟವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

2nd PUC exam 2026-ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆ-1: 7 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ, ಸಾವಿರಕ್ಕೂ ಅಧಿಕ ಮಕ್ಕಳಿಗೆ ನಿರಾಕರಣೆ

ಇಂದು ದೆಹಲಿಯಲ್ಲಿ ಚುನಾವಣೆ ನಡೆಸಿ... BJP 10 ಸ್ಥಾನ ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ: ಕೇಜ್ರಿವಾಲ್ ಸವಾಲು

ಹುಬ್ಬಳ್ಳಿ: ಕರ್ನಾಟಕದ ವಿರುದ್ಧ ಗೆದ್ದು ಚೊಚ್ಚಲ Ranji Trophy ತೆಗೆದುಕೊಂಡು ಹೋಗ್ತೀವಿ - ಜಮ್ಮು-ಕಾಶ್ಮೀರ ಸಿಎಂ

T20 World Cup 2026: ಇಂಗ್ಲೆಂಡ್ ವಿರುದ್ಧ ಗೆಲ್ಲುವ ಪಂದ್ಯ ಕೈಚೆಲ್ಲಿದ ಕಿವೀಸ್, ಪಾಕ್ ಸೆಮಿಸ್ ಕನಸು ಜೀವಂತ!

Ranji Final: ಚೊಚ್ಚಲ ಪ್ರಶಸ್ತಿ ಗೆಲುವಿನ ಸನಿಹದಲ್ಲಿ ಜಮ್ಮು-ಕಾಶ್ಮೀರ; ತವರಿನಲ್ಲೇ ಕರ್ನಾಟಕಕ್ಕೆ ದೊಡ್ಡ ಹಿನ್ನಡೆ!

SCROLL FOR NEXT