ದೇಶ

ಸಾಂಪ್ರದಾಯಿಕ ಔಷಧಗಳ ಜಾಗತಿಕ ಕೇಂದ್ರ ಸ್ಥಾಪನೆಗೆ ವಿಶ್ವ ಆರೋಗ್ಯ ಸಂಸ್ಥೆ ಭಾರತವನ್ನು ಆಯ್ಕೆ ಮಾಡಿದೆ: ಪ್ರಧಾನಿ ಮೋದಿ 

Sumana Upadhyaya

ನವದೆಹಲಿ: ವಿಶ್ವ ಆರೋಗ್ಯ ಸಂಸ್ಥೆ ಭಾರತದಲ್ಲಿ ಸಾಂಪ್ರದಾಯಿಕ ಔಷಧಿಯ ಮೇಲೆ ಡಬ್ಲ್ಯುಎಚ್ ಒ ಗ್ಲೋಬಲ್ ಸೆಂಟರ್ ನ್ನು ಸ್ಥಾಪಿಸುತ್ತಿದ್ದು, ಇಲ್ಲಿನ ಸಾಂಪ್ರದಾಯಿಕ, ಆಯುರ್ವೇದ ಔಷಧಗಳ ಮೇಲೆ ಸಂಶೋಧನೆಯನ್ನು ಬಲವರ್ಧಿಸುತ್ತದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಅವರು ಇಂದು ಆಯುರ್ವೇದ ದಿನದ ಅಂಗವಾಗಿವಿಡಿಯೊ ಕಾನ್ಫರೆನ್ಸ್ ಮೂಲಕ ಗುಜರಾತ್ ನ ಜಮ್ನಗರದಲ್ಲಿ ಮತ್ತು ರಾಜಸ್ತಾನದ ಜೈಪುರದಲ್ಲಿ ರಾಷ್ಟ್ರೀಯ ಆಯುರ್ವೇದ ಸಂಸ್ಥೆಗಳನ್ನು ಉದ್ಘಾಟಿಸಿ ಮಾತನಾಡಿದರು.

ಸಾಂಪ್ರದಾಯಿಕ ಔಷಧ ಕೇಂದ್ರ ಸ್ಥಾಪನೆಗೆ ವಿಶ್ವ ಆರೋಗ್ಯ ಸಂಸ್ಥೆ ಭಾರತವನ್ನು ಆಯ್ಕೆ ಮಾಡಿಕೊಂಡಿದ್ದು ನಮಗೆ ಹೆಮ್ಮೆಯ ಸಂಗತಿ, ಭಾರತದಲ್ಲಿ ತಲೆಯೆತ್ತಲಿರುವ ಸಾಂಪ್ರದಾಯಿಕ ಔಷಧಿ ಕೇಂದ್ರ ಜಾಗತಿಕ ಮಟ್ಟದಲ್ಲಿ ಬಹಳ ದೊಡ್ಡ ಕೇಂದ್ರವಾಗಿ ಬೆಳೆಯಲಿದೆ ಎಂಬ ವಿಶ್ವಾಸ ನನಗಿದೆ ಎಂದು ಪ್ರಧಾನಿ ಹೇಳಿದರು. 

SCROLL FOR NEXT