ಕೊರೋನಾ ವೈರಸ್ ಪರೀಕ್ಷೆ 
ದೇಶ

ದೆಹಲಿಯಲ್ಲಿ 24 ಗಂಟೆಗಳ ಅವಧಿಯಲ್ಲಿ 7340 ಹೊಸ ಸೋಂಕು ಪ್ರಕರಣಗಳು ಪತ್ತೆ..!

ಮಾರಕ ಕೊರೋನಾ ವೈರಸ್ ಸೋಂಕಿನ ಮೂರನೇ ಅಲೆ ಎದುರಿಸುತ್ತಿರುವ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು 7340 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ.

ನವದೆಹಲಿ: ಮಾರಕ ಕೊರೋನಾ ವೈರಸ್ ಸೋಂಕಿನ ಮೂರನೇ ಅಲೆ ಎದುರಿಸುತ್ತಿರುವ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು 7340 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ.

ಈ ಬಗ್ಗೆ ದೆಹಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದು, ದೆಹಲಿಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 7340 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಆ ಮೂಲಕ ದೆಹಲಿಯಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 4,82,170ಕ್ಕೆ ಏರಿಕೆಯಾಗಿದೆ. ಅಂತೆಯೇ ಕಳೆದ 24 ಗಂಟೆಗಳ ಅವಧಿಯಲ್ಲಿ  ದೆಹಲಿಯಲ್ಲಿ 7117 ಸೋಂಕಿತರು ಗುಣಮುಖರಾಗಿದ್ದು. ಆ ಮೂಲಕ ಒಟ್ಟಾರೆ ಗುಣಮುಖರ ಸಂಖ್ಯೆ 4,30,195ಕ್ಕೆ ಏರಿಕೆಯಾಗಿದೆ.

ಇನ್ನು ದೆಹಲಿಯಲ್ಲಿ ಪ್ರಸ್ತುತ 44,456 ಸಕ್ರಿಯ ಪ್ರಕರಣಗಳಿವೆ. ಅಂತೆಯೇ ದೆಹಲಿಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 96 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ದೆಹಲಿಯಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 7519ಕ್ಕೆ ಏರಿಕೆಯಾಗಿದೆ. 

ದೆಹಲಿಯಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 19,635 ಆರ್ ಟಿಪಿಸಿಆರ್ ಟೆಸ್ಟ್ ಗಳು ಮತ್ತು 30,010 ರ್ಯಾಪಿಡ್ ಆ್ಯಂಟಿ ಜೆನ್ ಟೆಸ್ಟ್ ಮಾಡಲಾಗಿದ್ದು, ಒಟ್ಟಾರೆ 54,28,472 ಕೋವಿಡ್ ಪರೀಕ್ಷೆ ನಡೆಸಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್