ದೇಶ

ಮಹಾರಾಷ್ಟ್ರದಲ್ಲಿ ಸೋಮವಾರದಿಂದ ದೇವಸ್ಥಾನ, ಮಸೀದಿ, ಚರ್ಚ್ ಗಳು ಪುನರಾರಂಭ

Lingaraj Badiger

ಮುಂಬೈ: ಮಹಾಮಾರಿ ಕೊರೋನಾ ವೈರಸ್ ಹರಡುವುದನ್ನು ತಡೆಯಲು ಕಳೆದ ಮಾರ್ಚ್‌ನಲ್ಲಿ ಲಾಕ್‌ಡೌನ್‌ ಜಾರಿಗೊಳಿಸಿದ ನಂತರ ಬಂದ್ ಆಗಿದ್ದ ಧಾರ್ಮಿಕ ಪೂಜಾ ಸ್ಥಳಗಳನ್ನು ಸೋಮವಾರದಿಂದ ರಾಜ್ಯಾದ್ಯಂತ ಮತ್ತೆ ತೆರೆಯಲಿವೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಶನಿವಾರ ಹೇಳಿದ್ದಾರೆ.

ರಾಜ್ಯದ ಜನತೆಗೆ ದೀಪಾವಳಿಯ ಶುಭಾಶಯ ಕೋರಿದ ಸಿಎಂ, "ರಾಕ್ಷಸ ಕೊರೋನಾ ವೈರಸ್ ಇನ್ನೂ ನಮ್ಮ ನಡುವೆಯೇ ಇದೆ ಎಂಬುದನ್ನು ನಾವು ಮರೆಯಬಾರದು. ಈ ರಾಕ್ಷಸನ ಅಬ್ಬರ ಈಗ ನಿಧಾನವಾಗಿ ಕಡಿಮೆಯಾಗುತ್ತಿದ್ದರೂ, ನಾವು ಸಂತೃಪ್ತರಾಗಲು ಸಾಧ್ಯವಿಲ್ಲ. ನಾಗರಿಕರು ಶಿಸ್ತನ್ನು ಪಾಲಿಸಬೇಕು ಎಂದು ಮನವಿ ಮಾಡಿದ್ದಾರೆ.

ಸಾಂಕ್ರಾಮಿಕ ಸಮಯದಲ್ಲಿ ಧಾರ್ಮಿಕ ಪೂಜಾ ಸ್ಥಳಗಳನ್ನು ಬಂದ್ ಮಾಡಿದ್ದರೂ, ದೇವರು ಎಲ್ಲಾ ಭಕ್ತರನ್ನು ವೈದ್ಯರು, ನರ್ಸ್ ಗಳು ಹಾಗೂ ಆರೋಗ್ಯ ಸಿಬ್ಬಂದಿಗಳ ರೂಪದಲ್ಲಿ ಬಂದು ನಮ್ಮ ಆರೋಗ್ಯ ನೋಡಿಕೊಂದ್ದಾನೆ ಎಂದು ಮುಖ್ಯಮಂತ್ರಿ ಹೇಳಿದರು.

ನವೆಂಬರ್ 16 ರಿಂದ ಭಕ್ತರಿಗಾಗಿ ರಾಜ್ಯದ ಎಲ್ಲಾ ಧಾರ್ಮಿಕ ಸ್ಥಳಗಳು ಮತ್ತೆ ತೆರೆಯಲಾಗುತ್ತಿದೆ. ಎಲ್ಲರಬ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಕೋವಿಡ್-19 ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಮಹಾರಾಷ್ಟ್ರ ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ.

SCROLL FOR NEXT