ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಖ್ಯಾತ ಬಂಗಾಳಿ ನಟ ಸೌಮಿತ್ರಾ ಚಟರ್ಜಿ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ, ಪವಾಡವಾಗ ಬೇಕು ಎಂದ ವೈದ್ಯರು

ಕಳೆದೊಂದು ತಿಂಗಳಿನಿಂದ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿರುವ ಖ್ಯಾತ ಬಂಗಾಳಿ ನಟ ಸೌಮಿತ್ರಾ ಚಟರ್ಜಿ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಪವಾಡವಾಗಬೇಕು ಎಂದು ವೈದ್ಯರು ಹೇಳಿದ್ದಾರೆ.

ಸೌಮಿತ್ರ ಚಟರ್ಜಿ
Srinivasa Murthy VN
Updated On : 15 Nov 2020, 12:01 am

ಕೋಲ್ಕತಾ: ಕಳೆದೊಂದು ತಿಂಗಳಿನಿಂದ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿರುವ ಖ್ಯಾತ ಬಂಗಾಳಿ ನಟ ಸೌಮಿತ್ರಾ ಚಟರ್ಜಿ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಪವಾಡವಾಗಬೇಕು ಎಂದು ವೈದ್ಯರು ಹೇಳಿದ್ದಾರೆ.

85 ವರ್ಷದ ಸೌಮಿತ್ರ ಚಟರ್ಜಿ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಮತ್ತು ಒಂದಕ್ಕಿಂತ ಹೆಚ್ಚು ಲೈಫ್ ಸಪೋರ್ಟ್ ಯಂತ್ರಗಳನ್ನು ಅಳವಡಿಸಲಾಗಿದ್ದು, ಕಳೆದ 24 ಗಂಟೆಗಳಲ್ಲಿ ಅವರ ಆರೋಗ್ಯ ಸ್ಥಿತಿ ಅತ್ಯಂತ ಗಂಭೀರವಾಗಿದೆ. ಪವಾಡ ನಡೆಯದ ಹೊರತು ನಾವು ಏನೂ ಹೇಳಲು ಸಾಧ್ಯವಿಲ್ಲ. ಅವರ ಆರೋಗ್ಯದಲ್ಲಿ ಚೇತರಿಕೆ  ಕಾಣಲಿ ಎಂದು ಎಲ್ಲರೂ ಪ್ರಾರ್ಥಿಸೋಣ ಎಂದು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸಿಟಿ ಆಸ್ಪತ್ರೆಯ ಹಿರಿಯ ವೈದ್ಯರು, ಚಟರ್ಜಿ ಅವರ ಪರಿಸ್ಥಿತಿ ನಿಜವಾಗಿಯೂ ಗಂಭೀರ ಮತ್ತು ನಿರ್ಣಾಯಕ ಹಂತದಲ್ಲಿದೆ. ಅವರ ಆಮ್ಲಜನಕದ ಅಗತ್ಯತೆ ಪ್ರಮಾಣ ಹೆಚ್ಚಾಗಿದ್ದು, ಮೂತ್ರಪಿಂಡದಗಳ ಕಾರ್ಯ ಸಂಪೂರ್ಣ ಹದಗೆಟ್ಟಿದೆ. ಗುರುವಾರ ಅವರಿಗೆ ಮೊದಲ ಪ್ಲಾಸ್ನಾ ಥೆರಪಿ  ನೀಡಲಾಗಿತ್ತು. ಬುಧವಾರ ಟ್ರಾಕಿಯೊಸ್ಟೊಮಿ ನಡೆಸಲಾಗಿತ್ತು. ಇದಾಗ್ಯೂ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿಲ್ಲ ಎಂದು ಹೇಳಿದ್ದಾರೆ.

Advertisement

Advertisement

ಅಕ್ಟೋಬರ್ 6 ರಂದು ಕೋವಿಡ್-19 ಧೃಢವಾಗಿರುವುದು ಕಂಡು ಬಂದ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments