ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ತಮಿಳುನಾಡು: ಬೆಂಕಿ ನಂದಿಸುತ್ತಿದ್ದ ವೇಳೆ ಕಟ್ಟಡ ಕುಸಿದು ಇಬ್ಬರು ಅಗ್ನಿ ಶಾಮಕ ಸಿಬ್ಬಂದಿ ಸಾವು

ಬೆಂಕಿ ನಂದಿಸಲು ಪ್ರಯತ್ನಿಸುತ್ತಿದ್ದಾಗ ಕಟ್ಟಡ ಕುಸಿದು ಇಬ್ಬರು ಅಗ್ನಿಶಾಮಕ ಸಿಬ್ಬಂದಿ ಮೃತಪಟ್ಟಿರುವ ದಾರುಣ ಘಟನೆ ಶನಿವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
Lingaraj Badiger
Updated On : 14 Nov 2020, 2:52 pm

ಮಧುರೈ: ಬೆಂಕಿ ನಂದಿಸಲು ಪ್ರಯತ್ನಿಸುತ್ತಿದ್ದಾಗ ಕಟ್ಟಡ ಕುಸಿದು ಇಬ್ಬರು ಅಗ್ನಿಶಾಮಕ ಸಿಬ್ಬಂದಿ ಮೃತಪಟ್ಟಿರುವ ದಾರುಣ ಘಟನೆ ಶನಿವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಧುರೈನಲ್ಲಿ ಹಳೆಯ ಕಟ್ಟಡವೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿತ್ತು. ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿಗೆ ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಕಟ್ಟಡ ಕುಸಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಸಿಬ್ಬಂದಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

Advertisement

Advertisement

ಮೃತ ಅಗ್ನಿ ಶಾಮಕ ಸಿಬ್ಬಂದಿ ಕೆ.ಶಿವರಾಜನ್ ಮತ್ತು ಪಿ ಕೃಷ್ಣಮೂರ್ತಿ ಅವರ ನಿಧನಕ್ಕೆ ಮುಖ್ಯಮಂತ್ರಿ ಪಳನಿಸ್ವಾಮಿ ಅವರು ಸಂತಾಪ ಸೂಚಿಸಿದ್ದು, ಅವರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅಲ್ಲದೆ ಮೃತ ಸಿಬ್ಬಂದಿಯ ಸಂಬಂಧಿಕರೊಬ್ಬರಿಗೆ ಅರ್ಹತೆಯ ಆಧಾರದ ಮೇಲೆ ಸರ್ಕಾರಿ ಕೆಲಸ ನೀಡಲಾಗುವುದು ಎಂದು ಸಿಎಂ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments