ಸೌಮಿತ್ರ ಚಟರ್ಜಿ 
ದೇಶ

ಖ್ಯಾತ ಬಂಗಾಳಿ ನಟ ಸೌಮಿತ್ರಾ ಚಟರ್ಜಿ ವಿಧಿವಶ

ಕಳೆದೊಂದು ತಿಂಗಳಿನಿಂದ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿರುವ ಖ್ಯಾತ ಬಂಗಾಳಿ ನಟ ಸೌಮಿತ್ರಾ ಚಟರ್ಜಿ ಅವರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ವಿಧಿವಶರಾಗಿದ್ದಾರೆ. 

ಕೋಲ್ಕತಾ: ಕಳೆದೊಂದು ತಿಂಗಳಿನಿಂದ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿರುವ ಖ್ಯಾತ ಬಂಗಾಳಿ ನಟ ಸೌಮಿತ್ರಾ ಚಟರ್ಜಿ ಅವರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ವಿಧಿವಶರಾಗಿದ್ದಾರೆ. 

85 ವರ್ಷದ ಸೌಮಿತ್ರ ಚಟರ್ಜಿಯವರು ಸ್ಪಂದಿಸುತ್ತಿಲ್ಲ ಮತ್ತು ಒಂದಕ್ಕಿಂತ ಹೆಚ್ಚು ಲೈಫ್ ಸಪೋರ್ಟ್ ಯಂತ್ರಗಳನ್ನು ಅಳವಡಿಸಲಾಗಿದ್ದು, ಕಳೆದ 24 ಗಂಟೆಗಳಲ್ಲಿ ಅವರ ಆರೋಗ್ಯ ಸ್ಥಿತಿ ಅತ್ಯಂತ ಗಂಭೀರವಾಗಿದೆ. ಪವಾಡ ನಡೆಯದ ಹೊರತು ನಾವು ಏನೂ ಹೇಳಲು ಸಾಧ್ಯವಿಲ್ಲ ಎಂದು ನಿನ್ನೆಯಷ್ಟೇ ವೈದ್ಯರು ತಿಳಿಸಿದ್ದರು. 

ಇದೀಗ ಚಿಕಿತ್ಸೆ ಫಲಕಾರಿಯಾಗದೆ ಸೌಮಿತ್ರ ಚಟರ್ಜಿಯವರು ಆಸ್ಪತ್ರೆಯಲ್ಲಿ ಕೊನೆಯುಸೆರೆಳೆದಿದ್ದಾರೆಂದು ವರದಿಗಳು ತಿಳಿಸಿವೆ. 

ಕ್ಯಾನ್ಸರ್ ನಿಂದ ಬಳಲುತ್ತಿರುವ ಸೌಮಿತ್ರ ಚಟರ್ಜಿ ಅವರಿಗೆ ಇತ್ತೀಚೆಗೆ ಕೊರೋನಾ ಪಾಸಿಟಿವ್ ದೃಢಪಟ್ಟಿತ್ತು. ಹೀಗಾಗಿ, ‌ ಅವರ  ಆರೋಗ್ಯದಲ್ಲಿ  ಮತ್ತಷ್ಟು ಏರಿಳಿತ‌ ಉಂಟಾಗಿತ್ತು, ಅವರ ಆರೋಗ್ಯದಲ್ಲಿ ಮತ್ತಷ್ಟು ವಿಷಮವಾಗಿದ್ದರಿಂದ ಅವರನ್ನು ಐಸಿಯುಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಧಾರವಾಡ: ಕಾರು - ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ