ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಗೆ ಕೊರೋನಾ ದೃಢ
ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ತಾವು ಕೋವಿಡ್ -19 ಧನಾತ್ಮಕ ವರದಿ ಪಡೆದಿರುವುದಾಗಿ ಸಿಂಗ್ ಭಾನುವಾರ ಹೇಳಿದ್ದಾರೆ.
ಇಂಪಾಲ್: ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ತಾವು ಕೋವಿಡ್ -19 ಧನಾತ್ಮಕ ವರದಿ ಪಡೆದಿರುವುದಾಗಿ ಸಿಂಗ್ ಭಾನುವಾರ ಹೇಳಿದ್ದಾರೆ.
ಕಳೆದ ಕೆಲವು ದಿನಗಳಲ್ಲಿ ತಮ್ಮೊಂದಿಗೆ ನಿಕಟ ಸಂಪರ್ಕಕ್ಕೆ ಬಂದ ಎಲ್ಲರೂ ತಮ್ಮನ್ನು ತಾವು ಪರೀಕ್ಷಿಸಿಕೊಳ್ಳುವಂತೆ ಮುಖ್ಯಮಂತ್ರಿ ವಿನಂತಿಸಿದ್ದಾರೆ.
ಫೇಸ್ಬುಕ್ ಮೂಲಕ ಮುಖ್ಯಮಂತ್ರಿ, "ಸ್ನೇಹಿತರೇ, ಕೊರೋನಾ ರೋಗಲಕ್ಷಣಗಳನ್ನು ಕಂಡುಕೊಂಡ ನಂತರ ನಾನಿಂದು ಕೋವಿಡ್ ಪಾಸಿಟಿವ್ ವರದಿ ಪಡೆದಿದ್ದೇನೆ. ಆದರೆ ನಾನೀಗ ಆರಾಮವಿದ್ದೇನೆ" ಎಂದು ಹೇಳಿದ್ದಾರೆ.
ಮಣಿಪುರ ಸಿಎಂ ಹೋಂ ಐಸೋಲೇಷನ್ ಗೆ ಒಳಗಾಗುತ್ತಿದ್ದಾರೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.