ದೇಶ

ಮಹಾರಾಷ್ಟ್ರದಲ್ಲಿ ತಗ್ಗಿದ ಕೊರೋನಾ ಅಬ್ಬರ; ಇಂದು 2,535 ಹೊಸ ಸೋಂಕು ಪ್ರಕರಣಗಳು ದಾಖಲು

Srinivasamurthy VN

ಮುಂಬೈ: ಭಾರತದ ಕೊರೋನಾ ಹಾಟ್ ಸ್ಪಾಟ್ ರಾಜ್ಯವೆಂದೇ ಕುಖ್ಯಾತಿ ಪಡೆದಿದ್ದ ಮಹಾರಾಷ್ಟ್ರದಲ್ಲಿ ಕೋವಿಡ್-19 ಸೋಂಕಿನ ಅಬ್ಬರ ತಗ್ಗಿದ್ದು, ಕಳೆದ 24 ಗಂಟೆಗಳಲ್ಲಿ 2,535 ಹೊಸ ಪ್ರಕರಣಗಳು ದಾಖಲಾಗಿವೆ. 

ಕಳೆದ 24 ಗಂಟೆಗಳ ಅವಧಿಯಲ್ಲಿ ಮಹಾರಾಷ್ಟ್ರದಲ್ಲಿ 2,535 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಇದು ಕಳೆದ ಐದು ತಿಂಗಳಲ್ಲೇ ದೈನಂದಿನ ಕನಿಷ್ಠ ಸಂಖ್ಯೆಯಾಗಿದೆ. ಆ ಮೂಲಕ ಮಹಾರಾಷ್ಟ್ರದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 17,49,777 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ  60 ಮಂದಿ ಸೋಂಕಿತರು ಸಾವುನ್ನಪ್ಪಿದ್ದು, ಆ ಮೂಲಕ ಸೋಂಕಿಗೆ ಬಲಿಯಾದವರ ಸಂಖ್ಯೆ 46,034ಕ್ಕೆ ಏರಿಕೆಯಾಗಿದೆ. ಅಂತೆಯೇ ಮಹಾರಾಷ್ಟ್ರದಲ್ಲಿ 24 ಗಂಟೆಗಳ ಅವಧಿಯಲ್ಲಿ 3,001 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಮಹಾರಾಷ್ಟ್ರದಲ್ಲಿ ಗುಣಮುಖರಾದ ಒಟ್ಟಾರೆ ಸೋಂಕಿತರ ಸಂಖ್ಯೆ  16,18,380ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರದಲ್ಲಿ ಪ್ರಸ್ತುತ 84,386 ಸಕ್ರಿಯ ಸೋಂಕು ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕತ್ಸೆ ಪಡೆಯುತ್ತಿದ್ದಾರೆ. ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಇಂದು 409 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಕಳೆದ ಮೇ ತಿಂಗಳಿನಿಂದೀಚೆಗೆ ದಾಖಲಾದ ಕನಿಷ್ಠ ಸಂಖ್ಯೆ ಇದಾಗಿದೆ. ಮುಂಬೈನ ಒಟ್ಟಾರೆ  ಸೋಂಕಿತರ ಸಂಖ್ಯೆ 2,70,119ಕ್ಕೆ ಏರಿಕೆಯಾಗಿದ್ದು, 10,585 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

SCROLL FOR NEXT