ತಮಿಳುನಾಡಿನಲ್ಲಿ ಇಂದು 1,652 ಹೊಸ ಸೋಂಕು ಪ್ರಕರಣಗಳು ಪತ್ತೆ
ಮಾರಕ ಕೊರೋನಾ ವೈರಸ್ ದಾಳಿಗೆ ತುತ್ತಾಗಿದ್ದ ತಮಿಳುನಾಡಿನಲ್ಲಿ ಕ್ರಮೇಣ ಹೊಸ ಸೋಂಕಿತರ ಸಂಖ್ಯೆ ಗಣನೀಯವಾಗಿ ತಗ್ಗಿದ್ದು, ಇಂದು 1,652 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.
ಚೆನ್ನೈ: ಮಾರಕ ಕೊರೋನಾ ವೈರಸ್ ದಾಳಿಗೆ ತುತ್ತಾಗಿದ್ದ ತಮಿಳುನಾಡಿನಲ್ಲಿ ಕ್ರಮೇಣ ಹೊಸ ಸೋಂಕಿತರ ಸಂಖ್ಯೆ ಗಣನೀಯವಾಗಿ ತಗ್ಗಿದ್ದು, ಇಂದು 1,652 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.
ಈ ಬಗ್ಗೆ ತಮಿಳುನಾಡು ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಇಂದು ತಮಿಳುನಾಡಿನಾದ್ಯಂತ 1,652 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ತಮಿಳುನಾಡಿನ ಒಟ್ಟಾರೆ ಸೋಂಕಿತರ ಸಂಖ್ಯೆ 7,61,568ಕ್ಕೆ ಏರಿಕೆಯಾಗಿದ್ದು, ಇಂದು 18 ಮಂದಿ ಸೋಂಕಿತರು ಸಾವನ್ನಪ್ಪಿದ್ದು ಆ ಮೂಲಕ ಕೊರೋನಾ ಸೋಂಕಿಗೆ ತಮಿಳುನಾಡಿನಲ್ಲಿ ಬಲಿಯಾದವರ ಸಂಖ್ಯೆ 11,513ಕ್ಕೆ ಏರಿಕೆಯಾಗಿದೆ.
ಇನ್ನು ಇಂದು ತಮಿಳುನಾಡಿನಲ್ಲಿ 2,314 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಈ ವರೆಗೂ ಗುಣಮುಖರಾದವರ ಸಂಖ್ಯೆ 7,34,970ಕ್ಕೆ ಏರಿಕೆಯಾಗಿದೆ. ಪ್ರಸ್ತುತ ತಮಿಳುನಾಡಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 16 ಸಾವಿರಕ್ಕಿಂತ ಕಡಿಮೆ ಎಂದರೆ 15,085ಕ್ಕೆ ಕುಸಿದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.