ಸಂಗ್ರಹ ಚಿತ್ರ 
ದೇಶ

6 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಹತ್ಯೆಗೈದು, ಶ್ವಾಸಕೋಶ ಕಿತ್ತೊಯ್ದ ಕಾಮುಕರು!

6 ವರ್ಷದ ಬಾಲಕಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಕಾಮುಕರು ಹತ್ಯೆಗೈದು ನಂತರ ಆಕೆಯ ಮೃತದೇಹದಿಂದ ಶ್ವಾಸಕೋಶವನ್ನು ಕೊಂಡೊಯ್ದಿರುವ ದೇಶವನ್ನೆ ಬೆಚ್ಚಿಬೀಳಿಸುವ ಭಯಾನಕ ಘಟನೆಯೊಂದು ಉತ್ತರಪ್ರದೇಶದಲ್ಲಿ ನಡೆದಿದೆ. 

ಲಖನೌ: 6 ವರ್ಷದ ಬಾಲಕಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಕಾಮುಕರು ಹತ್ಯೆಗೈದು ನಂತರ ಆಕೆಯ ಮೃತದೇಹದಿಂದ ಶ್ವಾಸಕೋಶವನ್ನು ಕೊಂಡೊಯ್ದಿರುವ ದೇಶವನ್ನೆ ಬೆಚ್ಚಿಬೀಳಿಸುವ ಭಯಾನಕ ಘಟನೆಯೊಂದು ಉತ್ತರಪ್ರದೇಶದಲ್ಲಿ ನಡೆದಿದೆ. 

ದೀಪಾವಳಿ ಹಬ್ಬದ ದಿನದಂದು ರಾತ್ರಿ ಘಟಾಂಪುರ ಪ್ರದೇಶದಿಂದ ಬಾಲಕಿ ನಾಪತ್ತೆಯಾಗಿದ್ದಳು. ಬಳಿಕ ಅರಣ್ಯ ಪ್ರದೇಶದಲ್ಲಿ ಬಾಲಕಿ ಶವ ಪತ್ತೆಯಾಗಿತ್ತು. 

ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಹತ್ಯೆಗೈದಿರುವ ಕಾಮುಕರು ನಂತರ ಆಕೆಯ ಶ್ವಾಸಕೋಶವನ್ನು ತೆಗೆದುಕೊಂಡು ಹೋಗಿರುವುದು ಕಂಡು ಬಂದಿದೆ. ಪ್ರಕರಣ ಸಂಬಂಧ ಅಂಕುಲ್ ಕುರಿಲ್ ಮತ್ತು ಬೀರನ್ ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. 

ಪ್ರಕರಣ ಪ್ರಮುಖ ರುವಾರಿ ಪರಶುರಾಮ್ ಎಂದು ಹೇಳಲಾಗುತ್ತಿದೆ. ಈತ 1999ರಲ್ಲಿಯೇ ವಿವಾಹವಾಗಿದ್ದರೂ ಮಕ್ಕಳಿರಲಿಲ್ಲ. ಹೀಗಾಗಿ ಮಾಟ ಮಂತ್ರ ಮಾಡುವವರ ಬಳಿ ಹೋಗಿದ್ದಾನೆ. ಈ ವೇಳೆ ಅವರು ಬಾಲಕಿಯೊಬ್ಬಳ ಶ್ವಾಸಕೋಶ ಬೇಕೆಂದು ಹೇಳಿದ್ದಾರೆ. 

ಇದನ್ನು ನಂಬಿದ ಪರಶುರಾಮ್ ತನ್ನ ಸಂಬಂಧಿಕರಾದ ಅಂಕುಲ್ ಹಾಗೂ ಬೀರನ್ ಬಳಿ ಬಾಲಕಿಯೊಬ್ಬಳ ಶ್ವಾಸಕೋಶವನ್ನು ತಂದು ಕೊಡುವಂತೆ ಹೇಳಿ ಹಣ ನೀಡುವುದಾಗಿ ತಿಳಿಸಿದ್ದಾನೆ. 

ಹೀಗಾಗಿ ಆರೋಪಿಗಳಿಬ್ಬರು ಬಾಲಕಿಯನ್ನು ಅಪಹರಣ ಮಾಡಿ ಕಾಡಿಗೆ ಕರೆದುಕೊಂಡು ಹೋಗಿದ್ದಾರೆ. ಹತ್ಯೆ ಮಾಡುವುದಕ್ಕೂ ಮುನ್ನ ಇಬ್ಬರು ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದಾರೆ. ನಂತರ ಶ್ವಾಸಕೋಶವನ್ನು ತೆಗೆದಿದ್ದಾರೆ. 

ಈ ನಡುವೆ ಬಾಲಕಿಯ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲು ಮಾಡಿದ್ದಾರೆ. ತನಿಖೆ ಆರಂಭಿಸಿದ್ದ ಪೊಲೀಸರಿಗೆ ಕಾಡಿನಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಬಾಲಕಿಯ ದೇಹದಲ್ಲಿ ಶ್ವಾಸಕೋಶ ನಾಪತ್ತೆಯಾಗಿರುವ ವಿಚಾರ ತಿಳಿದುಬಂದಿದೆ. ತನಿಖೆಯನ್ನು ಚುರುಕುಗೊಳಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಪರಶುರಾಮ್ ಹೆಸರನ್ನು ಹೇಳಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ