ಮಾಜಿ ಕೇಂದ್ರ ಸಚಿವ ಜಯಸಿಂಗ್ ರಾವ್ ಗಾಯಕ್ ವಾಡ್ ಪಾಟೀಲ್ 
ದೇಶ

ಮಹಾರಾಷ್ಟ್ರ: ಮಾಜಿ ಕೇಂದ್ರ ಸಚಿವ ಜಯಸಿಂಗ್ ರಾವ್ ಗಾಯಕ್ವಾಡ್ ಬಿಜೆಪಿಗೆ ರಾಜೀನಾಮೆ

ಕೇಂದ್ರದ ಮಾಜಿ ಸಚಿವ ಮತ್ತು ಹಿರಿಯ ಬಿಜೆಪಿ ಮುಖಂಡ ಜಯಸಿಂಗ್ ರಾವ್ ಗಾಯಕ್ ವಾಡ್ ಪಾಟೀಲ್  ಮಂಗಳವಾರ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಔರಾಂಗಬಾದ್: ಕೇಂದ್ರದ ಮಾಜಿ ಸಚಿವ ಮತ್ತು ಹಿರಿಯ ಬಿಜೆಪಿ ಮುಖಂಡ ಜಯಸಿಂಗ್ ರಾವ್ ಗಾಯಕ್ವಾಡ್ ಪಾಟೀಲ್  ಮಂಗಳವಾರ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಇಂದು ಬೆಳಗ್ಗೆ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿರುವ ಗಾಯಕವಾಡ್ ಪಾಟೀಲ್, ಪಕ್ಷಕ್ಕಾಗಿ ಕೆಲಸ ಮಾಡಲು ಸಿದ್ಧವಿದ್ದರೂ ಅವಕಾಶ ನೀಡುತ್ತಿಲ್ಲ. ಅದಕ್ಕಾಗಿ ಈ ನಿರ್ಧಾರ ಕೈಗೊಂಡಿರುವುದಾಗಿ ದೂರವಾಣಿ ಮೂಲಕ ತಿಳಿಸಿರುವುದಾಗಿ ಪಿಟಿಐ ಸುದ್ದಿಸಂಸ್ಥೆ  ತಿಳಿಸಿದೆ.

ಮಹಾರಾಷ್ಟ್ರ ಬಿಜೆಪಿ ಘಟಕ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿರುವುದಾಗಿ ಚಂದ್ರಕಾಂತ್ ಪಾಟೀಲ್ ಅವರಿಗೆ ಬರೆದಿರುವ ಪತ್ರದಲ್ಲಿರುವ ಜಯಸಿಂಗ್ ರಾವ್ ಗಾಯಕ್ ವಾಡ್ ಪಾಟೀಲ್ ತಿಳಿಸಿದ್ದಾರೆ. ಈ ಹಿಂದೆ ಕೇಂದ್ರ ಹಾಗೂ ಮಹಾರಾಷ್ಟ್ರ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿರುವುದಾಗಿ ಅವರು ಹೇಳಿದ್ದಾರೆ. 

ಕೇಂದ್ರ ಅಥವಾ ರಾಜ್ಯ ಸರ್ಕಾರದ ಸದಸ್ಯನಾಗಬೇಕಿರಲಿಲ್ಲ. ಪಕ್ಷ ಬಲಪಡಿಸುವ ಕೆಲಸ ಮಾಡಲು ಸಿದ್ಧವಾಗಿದ್ದು, ಅಂತಹ ಹೊಣೆ ವಹಿಸಿಕೊಳ್ಳಲು ದಶಕದಿಂದ ಕೇಳುತ್ತಿದ್ದರೂ ಯಾವುದೇ ಅವಕಾಶವೇ ನೀಡಲಿಲ್ಲ. ರಾಜ್ಯದಲ್ಲಿ ಪಕ್ಷ ಬೆಳೆಸುವ ಪ್ರಯತ್ನ ಮಾಡುವವರು ಬಿಜೆಪಿಗೆ ಬೇಕಾಗಿಲ್ಲ ಎಂದು ಅವರು ಹೇಳಿಕೊಂಡಿದ್ದಾರೆ.ಈ ವಿಚಾರದ  ಬಗ್ಗೆ ಪ್ರತಿಕ್ರಿಯೆ ನೀಡಲು ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್ ನಿರಾಕರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

19 ವರ್ಷಗಳ ಹಳೆಯ ದಾಖಲೆ ಉಡೀಸ್: ಅಭಿಷೇಕ್, ಪಾಂಡ್ಯ ಅಬ್ಬರ; ಜಿಂಬಾಬ್ವೆಗೆ 257 ರನ್‌ ಬೃಹತ್ ಮೊತ್ತದ ಗುರಿ ನೀಡಿದ ಭಾರತ!

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT