ದೇಶ

ನಿತೀಶ್ ಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ, ಗೃಹ ಖಾತೆ ಉಳಿಸಿಕೊಂಡ ಸಿಎಂ

Lingaraj Badiger

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಂಗಳವಾರ ತಮ್ಮ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದು, ಹಿಂದಿನಂತೆ ಗೃಹ ಖಾತೆಯಂತಹ ಪ್ರಮುಖ ಖಾತೆಗಳನ್ನು ತಮ್ಮ ಬಳಿಯೇ ಉಳಿಸಿಕೊಂಡಿದ್ದಾರೆ.

ಉಪಮುಖ್ಯಮಂತ್ರಿ ತಾರ್ ಕಿಶೋರ್ ಪ್ರಸಾದ್ ಅವರಿಗೆ ಹಣಕಾಸು, ವಾಣಿಜ್ಯ ತೆರಿಗೆ, ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಮತ್ತು ಮಾಹಿತಿ ತಂತ್ರಜ್ಞಾನ ಖಾತೆಯನ್ನು ನೀಡಲಾಗಿದೆ. ಈ ಎಲ್ಲಾ ಖಾತೆಗಳು ಈ ಹಿಂದೆ ಉಪ ಮುಖ್ಯಮಂತ್ರಿಯಾಗಿದ್ದ ಸುಶೀಲ್ ಕುಮಾರ್ ಮೋದಿ ಅವರ ಬಳಿ ಇದ್ದವು.

ಇದಲ್ಲದೆ, ಪ್ರಸಾದ್ ಅವರಿಗೆ ವಿಪತ್ತು ನಿರ್ವಹಣೆ ಮತ್ತು ನಗರಾಭಿವೃದ್ಧಿ ಖಾತೆಗಳನ್ನು ಹೆಚ್ಚುವರಿಯಾಗಿ ನೀಡಲಾಗಿದೆ ಎಂದು ರಾಜಭವನ ಪ್ರಕಟಣೆಯಲ್ಲಿ ತಿಳಿಸಿದೆ.

ಎರಡನೇ ಉಪಮುಖ್ಯಮಂತ್ರಿ ರೇಣು ದೇವಿ ಅವರಿಗೆ ಪಂಚಾಯತಿ ರಾಜ್, ಹಿಂದುಳಿದ ವರ್ಗಗಳು, ಅತ್ಯಂತ ಹಿಂದುಳಿದ ವರ್ಗಗಳು ಮತ್ತು ಕೈಗಾರಿಕಾ ಖಾತೆಯನ್ನು ನೀಡಲಾಗಿದೆ.

ನಿನ್ನೆಯಷ್ಟೇ ನಿತೀಶ್ ಕುಮಾರ್ ನಾಲ್ಕನೆ ಅವಧಿಗೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಅವರೊಂದಿಗೆ ಬಿಜೆಪಿಯ ಏಳು ಶಾಸಕರು ಸೇರಿದಂತೆ 14 ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

SCROLL FOR NEXT