ನಿತೀಶ್ ಕುಮಾರ್ ರಾಜಕೀಯವಾಗಿ ಬಳಲಿರುವ ತಿರಸ್ಕೃತ ನಾಯಕ: ಪ್ರಶಾಂತ್ ಕಿಶೋರ್ ಲೇವಡಿ
ನಿತೀಶ್ ಕುಮಾರ್ ಅವರನ್ನು ಮುಖ್ಯಮಂತ್ರಿ ಹುದ್ದೆಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ರಾಜಕೀಯವಾಗಿ ಬಳಲಿರುವ ತಿರಸ್ಕೃತ ನಾಯಕ ಆಗಿದ್ದಾರೆ ಎಂದು ರಾಜಕೀಯ ನಿಪುಣ ಪ್ರಶಾಂತ್ ಕಿಶೋರ್ ಹೇಳಿದ್ದಾರೆ.
ನವದೆಹಲಿ: ನಿತೀಶ್ ಕುಮಾರ್ ಅವರನ್ನು ಮುಖ್ಯಮಂತ್ರಿ ಹುದ್ದೆಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ರಾಜಕೀಯವಾಗಿ ಬಳಲಿರುವ ತಿರಸ್ಕೃತ ನಾಯಕ ಆಗಿದ್ದಾರೆ ಎಂದು ರಾಜಕೀಯ ನಿಪುಣ ಪ್ರಶಾಂತ್ ಕಿಶೋರ್ ಹೇಳಿದ್ದಾರೆ.
ಒಂದೊಮ್ಮೆ ನಿತೀಶ್ ಕುಮಾರ್ ಆಪ್ತರಾಗಿದ್ದ ಪ್ರಶಾಂತ್ ಕಿಶೋರ್ ಅವರನ್ನು ಜೆಡಿಯು ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಬಿಹಾರ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್ ಅವರನ್ನು ಬಿಹಾರವು ಇನ್ನಷ್ಟು ವರ್ಷಗಳವರೆಗೆ ನೀರಸ ಆಡಳಿತ ಅನುಭವಿಸಬೇಕಾಗಿದೆ ಎಂದು ಚುನಾವಣಾ ಪ್ರಶಾಂತ್ ಕಿಶೋರ್ ವ್ಯಂಗ್ಯವಾಡಿದ್ದಾರೆ.
‘ಬಿಜೆಪಿ ನಾಮನಿರ್ದೇಶಿತ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಿತೀಶ್ ಕುಮಾರ್ ಅವರಿಗೆ ಅಭಿನಂದನೆಗಳು. ರಾಜಕೀಯವಾಗಿ ತಿರಸ್ಕೃತ, ಬಳಲಿದ ನಾಯಕ ಮುಖ್ಯಮಂತ್ರಿಯಾಗಿರುವುದರಿಂದ ಬಿಹಾರವು ಇನ್ನಷ್ಟು ವರ್ಷಗಳ ಕಾಲ ನೀರಸ ಆಡಳಿತ ಅನುಭವಿಸಬೇಕಾಗಿದೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.