ಸೋನು ಸೂದ್ 
ದೇಶ

6 ವರ್ಷದ ಬಾಲಕಿ ಶಸ್ತ್ರಚಿಕಿತ್ಸೆಗೆ ನೆರವಾಗಿ ಮಾನವೀಯತೆ ಮೆರೆದ ನಟ ಸೋನು ಸೂದ್

ಕೊರೊನಾ ವೈರಸ್ ಮಹಾಮಾರಿ ಭಾರತಕ್ಕೆ ಕಾಲಿಟ್ಟ ಬಳಿಕ ಬಾಲಿವುಡ್ ನಟ ಸೋನು ಸೂದ್ ಅನೇಕರಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆಯುತ್ತಲೇ ಬಂದಿದ್ದಾರೆ. ಇದೀಗ ನಟ ಮತ್ತೊಂದು ಮಾನವೀಯ ಕಾರ್ಯ ಮಾಡುವ ಮೂಲಕ ಜನರ ಮನಗೆದ್ದಿದ್ದಾರೆ. 

ಹೈದರಾಬಾದ್: ಕೊರೊನಾ ವೈರಸ್ ಮಹಾಮಾರಿ ಭಾರತಕ್ಕೆ ಕಾಲಿಟ್ಟ ಬಳಿಕ ಬಾಲಿವುಡ್ ನಟ ಸೋನು ಸೂದ್ ಅನೇಕರಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆಯುತ್ತಲೇ ಬಂದಿದ್ದಾರೆ. ಇದೀಗ ನಟ ಮತ್ತೊಂದು ಮಾನವೀಯ ಕಾರ್ಯ ಮಾಡುವ ಮೂಲಕ ಜನರ ಮನಗೆದ್ದಿದ್ದಾರೆ. 

ಹೌದು, ಪಿತ್ತಜನಕಾಂಗ ಸಮಸ್ಯೆಯಿಂದ ಬಳಲುತ್ತಿದ್ದ ಹೈದರಾಬಾದ್'ನ 6 ವರ್ಷದ ಹರ್ಷವರ್ಧನ್ ಎಂಬ ಬಾಲಕನೊಬ್ಬನಿಗೆ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಸೋನು ಸೂತ್ ಅವರು ಸಹಾಯ ಹಸ್ತ ಚಾಚಿದ್ದಾರೆ. 

ಕಳೆದ ಆರು ತಿಂಗಳಿಂದ ಬಾಲಕ ಪಿತ್ತಜನಕಾಂಗ ಸಮಸ್ಯೆಯಿಂದ ಬಳಲುತ್ತಿದ್ದ. ತಿಂಗಳ ಹಿಂದಷ್ಟೇ ವೈದ್ಯರ ಬಳಿ ಪರಿಶೀಲನೆ ನಡೆಸಿದಾಗ ಪಿತ್ತಜನಕಾಂಗ ಸಂಪೂರ್ಣವಾಗಿ ಹಾಳಾಗಿರುವ ವಿಚಾರ ತಿಳಿದಿತ್ತು. ಕೂಡಲೇ ಶಸ್ತ್ರಚಿಕಿತ್ಸೆ ನಡೆಸಬೇಕೆಂದು ವೈದ್ಯರು ಹೇಳಿದ್ದರು. ಶಸ್ತ್ರಚಿಕಿತ್ಸೆಗೆ ರೂ,20 ಲಕ್ಷ ವೆಚ್ಚವಾಗುವುದು ಎಂದು ಹೇಳಿದ್ದರು. ಶಸ್ತ್ರಚಿಕಿತ್ಸೆ ಮಾಡಿಸದೇ ಹೋದರೆ ಬಾಲಕನ ಜೀವಕ್ಕೆ ಅಪಾಯವಿದೆಎಂದಿದ್ದರು ಎಂದು ಬಾಲಕನ ತಾಯಿ ಹೇಳಿದ್ದಾರೆ. 

ಶಸ್ತ್ರಚಿಕಿತ್ಸೆ ಮಾಡಿಸಲು ನಮ್ಮ ಬಳಿ ಹಣವಿರಲಿಲ್ಲ. ಹೀಗಾಗಿ ಮುಖ್ಯಮಂತ್ರಿಗಳ ನಿಧಿ ಹಾಗೂ ಆರೋಗ್ಯ ಯೋಜನೆಗಳಿಂದ ಸಹಾಯ ಪಡೆಯಲು ಸಾಕಷ್ಟು ಪ್ರಯತ್ನಗಳನ್ನು ನಡೆಸಿದ್ದೆವು. ಆದರೆ, ಎಲ್ಲಿಯೂ ಸಹಾಯ ಸಿಗಲಿಲ್ಲ. ಚಿತ್ರೀಕರಣಗಳಲ್ಲಿ ಬಿಝಿಯಾಗಿದ್ದರೂ ಕೂಡ ವಿಚಾರ ತಿಳಿದ ಕೂಡಲೇ ಸೋನು ಸೂದ್ ಅವರು ನಮ್ಮನ್ನು ಭೇಟಿ ಮಾಡಿ, ಸಹಾಯ ಮಾಡುವುದಾಗಿ ತಿಳಿಸಿದ್ದರು. ಶಸ್ತ್ರಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಅವರೇ ಭರಿಸಿದ್ದಾರೆ. ನಮ್ಮ ಕೊನೆ ಉಸಿರಿರುವವರೆಗೂ ಅವರ ಸಹಾಯವನ್ನು ನಾವು ಮರೆಯುವುದಿಲ್ಲ. ಭವಿಷ್ಯದಲ್ಲಿಯೂ ನಮ್ಮಂತೆಯೇ ಸಮಸ್ಯೆ ಎದುರಿಸುತ್ತಿರುವ ಸಾಕಷ್ಟು ಜನರಿಗೆ ಸಹಾಯ ಮಾಡುತ್ತಾರೆಂಬ ವಿಶ್ವಾಸ ನಮಗಿದೆ ಎಂದು ತಿಳಿಸಿದ್ದಾರೆ. 

ಯಕೃತ್ತಿನ ಸಿರೋಸಿಸ್ ನಿಂದ ಬಾಲಕ ಬಳಲುತ್ತಿದ್ದ. ಕೂಡಲೇ ಶಸ್ತ್ರಚಿಕಿತ್ಸೆ ಮಾಡಲೇಬೇಕಿತ್ತು ಎಂದು ಬಾಲಕನಿಗೆ ಚಿಕಿತ್ಸೆ ನೀಡಿದ್ದ ವೈದ್ಯ ಮನೀಶ್ ವರ್ಮಾ ಅವರು ಹೇಳಿದ್ದಾರೆ. 

ಶಸ್ತ್ರಚಿಕಿತ್ಸೆ ಅತ್ಯಂತ ಗಂಭೀರವಾಗಿತ್ತು. ಚಿಕಿತ್ಸೆ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವ ಹಾಗಿರಲಿಲ್ಲ. ಕೊನೆಗೂ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಯಿತು. ನಮ್ಮ ವೈದ್ಯರ ತಂಡ ಹಾಗೂ ಸೋನು ಸೂದ್ ಅವರ ಸಹಾಯ ಮಗುವಿಗೆ ಆರೋಗ್ಯಕರ ಜೀವನ ನಡೆಸಲು ಸಾಧ್ಯ ಮಾಡಿದೆ ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

India vs Afghanistan: ಅಭಿಷೇಕ್ ಅಬ್ಬರಕ್ಕೆ ಅಫ್ಘಾನ್ ಧೂಳೀಪಟ; 127 ರನ್‌ಗಳ ಭರ್ಜರಿ ಜಯ, T20 ಸರಣಿ ಕ್ಲೀನ್ ಸ್ವೀಪ್

'ಮೇಡಂ, ನಿಮ್ಮಂತ ಸುಂದರಿ ಯಾರೂ ಇಲ್ಲ'; ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ, CM ಕೋಟಾದಡಿ IAS ಹುದ್ದೆ ಕೊಡಿಸ್ತೇನೆ!

Tata sons ಅಧ್ಯಕ್ಷರಾಗಿ ಚಂದ್ರಶೇಖರನ್ ಮರು ಆಯ್ಕೆ, IPO ಗೆ ಮತದಾನ ಕಾನೂನುಬಾಹಿರ- ಟಾಟಾ ಟ್ರಸ್ಟ್ಸ್ ತಗಾದೆ

ರಾಮ ಮಂದಿರ ತೀರ್ಪು ಬಂದಾಗ ಶಾರುಖ್, ಸಲ್ಮಾನ್, ಆಮಿರ್ ಖಾನ್ ಬಳಿ ಕ್ಷಮೆ ಕೇಳಿದ್ದೆ; ಹಿಂದೂವಾಗಿ ನನಗೆ ಅಸಹ್ಯವಾಗಿತ್ತು: ನಟಿ ಸ್ವರಾ ಭಾಸ್ಕರ್

India vs Afghanistan: ರೋಹಿತ್ ಶರ್ಮಾ ದಾಖಲೆ ಮುರಿದ ಅಭಿಷೇಕ್ ಶರ್ಮಾ; T20 ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ!