ದೇಶ

ವಿಶಾಖಪಟ್ಟಣಮ್ ಮೃಗಾಲಯ ಸಾರ್ವಜನಿಕ ಪ್ರವೇಶಕ್ಕೆ ಮುಕ್ತ 

Srinivas Rao BV

ವಿಶಾಖಪಟ್ಟಣಮ್: ಆಂಧ್ರಪ್ರದೇಶದ ವಿಶಾಖಪಟ್ಟಣಮ್ ಮೃಗಾಲಯ ನ.17 ರಿಂದ ಸಾರ್ವಜನಿಕ ಪ್ರವೇಶಕ್ಕೆ ಮುಕ್ತವಾಗಿದೆ. 

ಕೊರೋನಾ ಹಿನ್ನೆಲೆಯಲ್ಲಿ ಪಾಲನೆಯಾಗಬೇಕಾದ ನಿಯಮಗಳಿಗೆ ಕೇಂದ್ರ ಸರ್ಕಾರದ ನಿರ್ದೇಶನಗಳ ಪ್ರಕಾರ ಆಂಧ್ರಪ್ರದೇಶದ ಸರ್ಕಾರ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಿದೆ. ಮೃಗಾಲಯಕ್ಕೆ ಭೇಟಿ ನೀಡುವವರು ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. 

ಪ್ರವಾಸಿಗರಿಗೆ ಥರ್ಮಲ್ ಸ್ಕ್ಯಾನಿಂಗ್ ಹಾಗೂ ಮಾಸ್ಕ್ ಧರಿಸಿರುವುದನ್ನು ಪರಿಶೀಲನೆ ಮಾಡಿಯೇ ಪ್ರವೇಶ ಕಲ್ಪಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಮೃಗಾಲಯಕ್ಕೆ ಭೇಟಿ ನೀಡುವವರು ಆನ್ ಲೈನ್ ಮೂಲಕವೂ ಟಿಕೆಟ್ ಗಳನ್ನು ಕಾಯ್ದಿರಿಸಬಹುದಾಗಿದ್ದು, ಕೌಂಟರ್ ಗಳಲ್ಲಿ ಸಂಪರ್ಕವನ್ನು ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ. ಮೃಗಾಲಯದೊಳಗೆ ಹೊರಗಿನ ಆಹಾರ, ಪ್ಲಾಸ್ಟಿಕ್ ಉತ್ಪನ್ನಗಳು, ಪಟಾಕಿಗಳನ್ನು ತರುವಂತಿಲ್ಲ. ನಿಯಮ ಉಲ್ಲಂಘನೆ ಮಾಡಿದವರಿಗೆ ದಂಡ ವಿಧಿಸಲಾಗುತ್ತದೆ ಎಂದು ಮೃಗಾಲಯದ ಅಧಿಕಾರಿಗಳು ಎಚ್ಚರಿಸಿದ್ದಾರೆ.

SCROLL FOR NEXT