ಅಪಘಾತಕ್ಕೀಡಾಗಿರುವ ಕಾರು 
ದೇಶ

ಬಿಜೆಪಿ ನಾಯಕಿ ಖುಷ್ಬೂ ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಅದೃಷ್ಟವಶಾತ್ ಪ್ರಾಣಾಪಾಯದಿಂದ ನಟಿ ಪಾರು

ತಮಿಳುನಾಡು ಬಿಜೆಪಿ ನಾಯಕರಿ ಹಾಗೂ ನಟಿ ಖುಷ್ಬೂ ಸುಂದರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಬುಧವಾರ ಮೇಲ್ಮರವತ್ತೂರ್'ನಲ್ಲಿ ನಡೆದಿದೆ. 

ಮೇಲ್ಮರವತ್ತೂರ್: ತಮಿಳುನಾಡು ಬಿಜೆಪಿ ನಾಯಕರಿ ಹಾಗೂ ನಟಿ ಖುಷ್ಬೂ ಸುಂದರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಬುಧವಾರ ಮೇಲ್ಮರವತ್ತೂರ್'ನಲ್ಲಿ ನಡೆದಿದೆ. 

ಕಾರಿನ ಎದುರಿಗೆ ಬಂದಿರುವ ಟ್ಯಾಂಕರ್ ಒಂದು ಖುಷ್ಬೂ ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಖುಷ್ಬೂ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ವರದಿಗಳು ತಿಳಿಸಿವೆ. 

ಖುಷ್ಬೂ ಅವರು ಕಡಲೂರು ಕಡೆಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಮೇಲ್ ಮರವತ್ತೂರ್ ಸಮೀಪ ಅಪಘಾತ ಸಂಭವಿಸಿದೆ. 

ಘಟನೆ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಖುಷ್ಬೂ ಅವರು, ನಿಮ್ಮೆಲ್ಲರ ಆಶೀರ್ವಾದ ಹಾಗೂ ದೇವರ ಕೃಪೆಯಿಂದ ನಾನು ಸುರಕ್ಷಿತವಾಗಿದ್ದೇನೆ. ಕಡೂರು ಕಡೆಗೆ ನಾನು ಪ್ರಯಾಣಿಸುತ್ತಿದ್ದೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನನ್ನ ಪತಿ ನಂಬಿರುವ ದೇವರು ಮುರುಗನ್ ನಮ್ಮನ್ನು ಬದುಕಿಸಿದ ಎಂದು ಹೇಳಿಕೊಂಡಿದ್ದಾರೆ. 

ನಮ್ಮ ಕಾರು ಸರಿಯಾದ ಮಾರ್ಗದಲ್ಲಿಯೇ ಸಾಗುತ್ತಿತ್ತು. ಆದರೆ, ಇದ್ದಕ್ಕಿದ್ದಂತೆ ಎಲ್ಲಿಂದಲೋ ಬಂದ ಟ್ಯಾಂಕರ್ ಕಾರಿಗೆ ಡಿಕ್ಕಿ ಹೊಡೆಯಿತು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT