ದೇಶ

ಹಿರಿಯ ಕಾಂಗ್ರೆಸ್ ನಾಯಕ ಎಕೆ ಆ್ಯಂಟನಿ, ಪತ್ನಿಗೆ ಕೊರೋನಾ ಪಾಸಿಟಿವ್

Lingaraj Badiger

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಎ.ಕೆ. ಆ್ಯಂಟನಿ ಹಾಗೂ ಅವರ ಪತ್ನಿ ಎಲಿಜಬೆತ್ ಆ್ಯಂಟನಿ ಅವರಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ.

ನನ್ನ ತಂದೆ ಎಕೆ ಆ್ಯಂಟನಿ ಹಾಗೂ ತಾಯಿ ಎಲಿಜಬೆತ್ ಅವರಿಗೆ ಕೋವಿಡ್-19 ಪಾಸಿಟಿವ್ ಬಂದಿದ್ದು, ಇಬ್ಬರೂ ದೆಹಲಿಯ ಏಮ್ಸ್ ಆಸ್ಪತ್ರೆದೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆ್ಯಂಟನಿ ಅವರ ಪುತ್ರ ಅನಿಲ್ ಆ್ಯಂಟನಿ ಅವರು ಟ್ವೀಟ್ ಮಾಡಿದ್ದಾರೆ.

ಇತ್ತೀಚಿಗಷ್ಟೇ ಮತ್ತೊಬ್ಬ ಕಾಂಗ್ರೆಸ್ ನಾಯಕ ಅಹಮ್ಮದ್ ಪಟೇಲ್ ಅವರಿಗೂ ಕೊರೋನಾ ಪಾಸಿಟಿವ್ ದೃಢಪಟ್ಟಿತ್ತು. ಇದೀಗ ಮತ್ತೊಬ್ಬ ಹಿರಿಯ ಕಾಂಗ್ರೆನ್ ನಾಯಕನಿಗೆ ಕೊರೋನಾ ಸೋಂಕು ತಗುಲಿದೆ.

SCROLL FOR NEXT