ದೇಶ

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 45,576 ಹೊಸ ಕೇಸ್ ಪತ್ತೆ, 585 ಮಂದಿ ಸಾವು

Manjula VN

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 45,576 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 89,58,484ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ. 

ಇನ್ನು ನಿನ್ನೆ ಒಂದೇ ದಿನ 585 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 1,31,578ಕ್ಕೆ ತಲುಪಿದೆ ಎಂದು ಸಚಿವಾಲಯ ತಿಳಿಸಿದೆ. 

ಈ ನಡುವೆ ನಿನ್ನೆ ಒಂದೇ ದಿನ 48,493 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಚೇತರಿಸಿಕೊಂಡವರ ಸಂಖ್ಯೆ 83,83,603ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಇದೀಗ 4,43,303 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಇನ್ನು ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 10,28,203 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 12,85,08,389 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

SCROLL FOR NEXT