ದೇಶ

ಈಗ ಮತ್ತೊಂದು ಟ್ವೀಟ್ ಗಾಗಿ ಕಾಮ್ರಾ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಎಜಿ ಅಸ್ತು

Lingaraj Badiger

ನವದೆಹಲಿ: ಸುಪ್ರೀಂ ಕೋರ್ಟ್‌ ವಿರುದ್ಧದ ತಮ್ಮ ವಿವಾದಾತ್ಮಕ ಟ್ವೀಟ್‌ಗಳನ್ನು ಡಿಲೀಟ್ ಮಾಡುವುದಿಲ್ಲ ಎಂದು ನವೆಂಬರ್ 18 ಮಾಡಿದ್ದ ಹೊಸ ಟ್ವೀಟ್ ಗೆ ಸಂಬಂಧಿಸಿದಂತೆ ಕಾಮಿಡಿಯನ್ ಕುನಾಲ್ ಕಾಮ್ರಾ ಅವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಅವರು ಶುಕ್ರವಾರ ಅನುಮತಿ ನೀಡಿದ್ದಾರೆ.

ಕಳೆದ ವಾರ ರಿಪಬ್ಲಿಕ್ ಟಿವಿ ಸಂಪಾದಕ ಆರ್ನಬ್ ಗೋಸ್ವಾಮಿ ಜಾಮೀನು ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಆದೇಶವನ್ನು ಟೀಕಿಸಿ ಕಾಮ್ರಾ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಒಪ್ಪಿಗೆ ನೀಡಿದ್ದರು. ಈಗ ಹೊಸ ಟ್ವೀಟ್ ಗೆ ಸಂಬಂಧಿಸಿದಂತೆ ಮತ್ತೊಂದು ಕೇಸ್ ದಾಖಲಿಸಲು ಅನುಮತಿ ನೀಡಿದ್ದಾರೆ.

ಇದು "ಅತ್ಯಂತ ಅಶ್ಲೀಲ ಮತ್ತು ಅಸಹ್ಯಕರ". ಇದು ಸುಪ್ರೀಂ ಕೋರ್ಟ್‌ನ ಅಧಿಕಾರವನ್ನು ಕಡಿಮೆ ಮಾಡುವ ಉದ್ದೇಶ ಹೊಂದಿದೆ. ನ್ಯಾಯಾಂಗದ ಮೇಲೆ ಆಕ್ರಮಣ ಮಾಡುವುದರಿಂದ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂಬುದನ್ನು ಜನರು ಅರ್ಥಮಾಡಿಕೊಳ್ಳಬೇಕು ಎಂದು ಅಟಾರ್ನಿ ಜನರಲ್ ಹೇಳಿದ್ದಾರೆ.

ಕಾಮಿಡಿಯನ್ ಕುನಾಲ್ ಕಾಮ್ರಾ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅನುಮತಿ ಕೋರಿ ಪ್ರಯಾಗರಾಜ್ ಮೂಲದ ವಕೀಲ ಅನುಜ್ ಸಿಂಗ್ ಅವರು ಅರ್ಜಿ ಸಲ್ಲಿಸಿದ್ದರು. ಅದಕ್ಕೆ ವೇಣುಗೋಪಾಲ್ ಒಪ್ಪಿಗೆ ನೀಡಿದ್ದಾರೆ.

SCROLL FOR NEXT