ಸಾಂದರ್ಭಿಕ ಚಿತ್ರ 
ದೇಶ

ಕೊರೋನಾ 2ನೇ ಅಲೆ: ಮುಂಬೈನಲ್ಲಿ ಶಾಲೆ-ಕಾಲೇಜ್ ಗಳ ಪುನರಾರಂಭ ಡಿ.31ಕ್ಕೆ ಮುಂದೂಡಿಕೆ

ಮುಂಬೈನಲ್ಲಿ ಮಹಾಮಾರಿ ಕೊರೋನಾ ವೈರಸ್ ನ ಎರಡನೇ ಅಲೆ ಆರಂಭವಾಗಿದ್ದು, ದೇಶದ ವಾಣಿಜ್ಯ ನಗರಿಯಲ್ಲಿ ಶಾಲಾ-ಕಾಲೇಜ್ ಗಳನ್ನು ಡಿಸೆಂಬರ್ 31ರ ವರೆಗೆ ಬಂದ್ ಮಾಡಲು ನಿರ್ಧರಿಸಲಾಗಿದೆ.

ಮುಂಬೈ: ಮುಂಬೈನಲ್ಲಿ ಮಹಾಮಾರಿ ಕೊರೋನಾ ವೈರಸ್ ನ ಎರಡನೇ ಅಲೆ ಆರಂಭವಾಗಿದ್ದು, ದೇಶದ ವಾಣಿಜ್ಯ ನಗರಿಯಲ್ಲಿ ಶಾಲಾ-ಕಾಲೇಜ್ ಗಳನ್ನು ಡಿಸೆಂಬರ್ 31ರ ವರೆಗೆ ಬಂದ್ ಮಾಡಲು ನಿರ್ಧರಿಸಲಾಗಿದೆ.

ನವೆಂಬರ್ 23ರಿಂದ ಮುಂಬೈ ಸೇರಿದಂತೆ ಮಹಾರಾಷ್ಟ್ರದಾದ್ಯಂತ ಶಾಲಾ-ಕಾಲೇಜ್ ಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿತ್ತು. ಆದರೆ ಕೊರೋನಾ ವೈರಸ್ ಪ್ರಕರಣಗಳು ಮತ್ತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೃಹನ್ ಮುಂಬೈ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಶಾಲಾ-ಕಾಲೇಜ್ ಗಳ ಪುನರಾರಂಭವನ್ನು ಡಿಸೆಂಬರ್ 31ಕ್ಕೆ ಮುಂದೂಡಲಾಗಿದೆ.

ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಮವಾರದಿಂದ ಮುಂಬೈನಲ್ಲಿ ಶಾಲೆಗಳು ಆರಂಭವಾಗುವುದಿಲ್ಲ ಎಂದು ಮುಂಬೈ ಮೇಯರ್ ಕಿಶೋರಿ ಪೆಡ್ನೆಕರ್ ಅವರು ಹೇಳಿದ್ದಾರೆ.

ಮುಂಬೈನಲ್ಲಿ ಗುರುವಾರ 924 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ನಗರದ ಸೋಂಕಿತರ ಸಂಖ್ಯೆಯನ್ನು 2,72,449 ಕ್ಕೆ ತಲುಪಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!