ಲಸಿಕೆ ಪಡೆಯುತ್ತಿರುವ ಅನಿಲ್ ವಿಜ್ 
ದೇಶ

ಕೋವ್ಯಾಕ್ಸಿನ್ 3ನೇ ಹಂತದ ಪ್ರಯೋಗ: ಲಸಿಕೆ ಹಾಕಿಸಿಕೊಂಡ ಹರಿಯಾಣ ಆರೋಗ್ಯ ಸಚಿವ್ ಅನಿಲ್ ವಿಜ್

ಕೊರೋನಾ ವೈರಸ್ ಗೆ ಲಸಿಕೆ ಕೋವ್ಯಾಕ್ಸಿನ್​ ಕ್ಲಿನಿಕಲ್​ ಟ್ರಯಲ್ ನ ಮೂರನೇ ಹಂತದ ಪ್ರಯೋಗ ಹರಿಯಾಣದಲ್ಲಿ ನಡೆಯಲಿದ್ದು, ಆರೋಗ್ಯ ಸಚಿವ ಅನಿಲ್ ವಿಜ್ ಅವರು ಸ್ವಯಂಪ್ರೇರಿತವಾಗಿ ಶುಕ್ರವಾರ ಮೊದಲ ಲಸಿಕೆ ಹಾಕಿಸಿಕೊಂಡಿದ್ದಾರೆ.

ಅಂಬಾಲ: ಕೊರೋನಾ ವೈರಸ್ ಗೆ ಲಸಿಕೆ ಕೋವ್ಯಾಕ್ಸಿನ್​ ಕ್ಲಿನಿಕಲ್​ ಟ್ರಯಲ್ ನ ಮೂರನೇ ಹಂತದ ಪ್ರಯೋಗ ಹರಿಯಾಣದಲ್ಲಿ ನಡೆಯಲಿದ್ದು, ಆರೋಗ್ಯ ಸಚಿವ ಅನಿಲ್ ವಿಜ್ ಅವರು ಸ್ವಯಂಪ್ರೇರಿತವಾಗಿ ಶುಕ್ರವಾರ ಮೊದಲ ಲಸಿಕೆ ಹಾಕಿಸಿಕೊಂಡಿದ್ದಾರೆ.

ಐಸಿಎಂಆರ್ ಹಾಗೂ ಭಾರತ್ ಬಯೋಟೆಕ್ ಸಂಸ್ಥೆಯ ಸಹಯೋಗದಲ್ಲಿ ಕೋವ್ಯಾಕ್ಸಿನ್ ಲಸಿಕೆಯ ಮೂರನೇ ಹಂತದ ಟ್ರಯಲ್ ನಲ್ಲಿದ್ದು, ಸುರಕ್ಷಾ ಹಾಗೂ ಪರಿಣಾಮಕಾರಿತ್ವದ ಬಗ್ಗೆ ಪರೀಕ್ಷೆ ನಡೆಸಲಾಗುತ್ತಿದೆ.

ಹರಿಯಾಣದಲ್ಲಿ ಇಂದಿನಿಂದ ಮೂರನೇ ಹಂತದ ಪ್ರಯೋಗ ಆರಂಭವಾಗಿದ್ದು, ಅನಿಲ್ ವಿಜ್ ಅವರು ಸ್ವಯಂಸೇವಕರಾಗಿ ಅಂಬಾಲ ಆಸ್ಪತ್ರೆಯಲ್ಲಿ ಮೊದಲ ಲಸಿಕೆಯನ್ನು ಪಡೆದಿದ್ದಾರೆ.

ಭಾರತದ ಕಂಪನಿಯೊಂದು ಕೊರೋನಾ ವೈರಸ್‌ಗೆ ಲಸಿಕೆ ಅಭಿವೃದ್ಧಿಪಡಿಸಿರುವುದು ಹೆಮ್ಮೆಯ ವಿಷಯವಾಗಿದೆ. ಎರಡು ಹಂತಗಳಲ್ಲಿ ಯಶಸ್ವಿ ಪ್ರಯೋಗಗಳು ನಡೆದಿವೆ ಮತ್ತು ಮೂರನೇ ಹಂತ ಇಂದು ಪ್ರಾರಂಭವಾಗಿದೆ. ನಾನು ಮೊದಲ ಸ್ವಯಂಸೇವಕನಾಗಲು ಅವಕಾಶ ಪಡೆದಿದ್ದೇನೆ. ಯಾವುದೇ ಭಯವಿಲ್ಲದ ಜನರು ವ್ಯಾಕ್ಸಿನೇಷನ್ ಪ್ರಯೋಗಗಳಿಗೆ ಮುಂದೆ ಬರಬೇಕು. ಎಲ್ಲವೂ ಸರಿಯಾಗಿ ನಡೆದರೆ, ಈ ಲಸಿಕೆ ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ ”ಎಂದು ಅನಿಲ್ ವಿಜ್ ಅವರು ಎಎನ್‌ಐಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!