ಟೀನಾ ಡಾಬಿ ಮತ್ತು ಅಥರ್ ಖಾನ್ ಜೋಡಿ 
ದೇಶ

ಐಎಎಸ್‌ ಟಾಪರ್‌ ಟೀನಾ ಡಾಬಿ, ಅಥರ್‌ ಖಾನ್‌ ಜೋಡಿ ವಿಚ್ಛೇದನಕ್ಕೆ ಅರ್ಜಿ!

2015ನೇ ಸಾಲಿನ ಐಎಎಸ್‌ ಪರೀಕ್ಷೆಯಲ್ಲಿ ಮೊದಲ ರ‍್ಯಾಂಕ್ ಪಡೆದಿದ್ದ ಟೀನಾ ಡಾಬಿ ಹಾಗೂ ಅವರ ಪತಿ ಅಥರ್‌ ಖಾನ್‌ ವಿಚ್ಛೇದನಕ್ಕೆ ಜೈಪುರ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಜೈಪುರ: 2015ನೇ ಸಾಲಿನ ಐಎಎಸ್‌ ಪರೀಕ್ಷೆಯಲ್ಲಿ ಮೊದಲ ರ‍್ಯಾಂಕ್ ಪಡೆದಿದ್ದ ಟೀನಾ ಡಾಬಿ ಹಾಗೂ ಅವರ ಪತಿ ಅಥರ್‌ ಖಾನ್‌ ವಿಚ್ಛೇದನಕ್ಕೆ ಜೈಪುರ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಡಿಎನ್ ಎ ಪತ್ರಿಕೆ ವರದಿ ಮಾಡಿದ್ದು. ಜೈಪುರ ಕೋರ್ಟ್ ನಲ್ಲಿ ಟೀನಾ ಡಾಬಿ ಹಾಗೂ ಅವರ ಪತಿ ಅಥರ್‌ ಖಾನ್‌ ಅವರು ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ವರದಿಯಲ್ಲಿರುವಂತೆ ಕೆಲ ದಿನಗಳ ಹಿಂದೆ ಟೀನಾ ಡಾಬಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ʼಖಾನ್‌ʼ ಸರ್‌  ನೇಮ್‌ ತೆಗೆದು ಹಾಕಿದ್ದರು. ಅಥರ್‌ ಖಾನ್‌ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಟಿನಾ ಅವರನ್ನು ಅನ್‌ಫಾಲೋ ಮಾಡಿದ್ದರು.

ಇದೀಗ ಅಧಿಕೃತವಾಗಿ ಇಬ್ಬರೂ ವಿಚ್ಛೇಧನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಕಾಶ್ಮೀರ ಮೂಲದವರಾದ ಅಥರ್‌ ಖಾನ್‌ 2015ರ ಐಎಎಸ್‌ ಪರೀಕ್ಷೆಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದ್ದರು. ಇದೇ ಪರೀಕ್ಷೆಯಲ್ಲಿ ಟೀನಾ ಡಾಬಿ ಅಗ್ರ ಸ್ಥಾನಿಯಾಗಿದ್ದರು. ಟೀನಾ ಮತ್ತು ಅಥರ್‌ ತರಬೇತಿ ಸಂದರ್ಭದಲ್ಲಿ ಪರಸ್ಪರ  ಪ್ರೀತಿಸಲಾರಂಭಿಸಿದ್ದರು ಎನ್ನಲಾಗಿದ್ದು, ಪ್ರೇಮಿಗಳಾಗಿದ್ದ ಇಬ್ಬರು 2018ರಲ್ಲಿ ಮದುವೆಯಾಗಿದ್ದರು. ಸದ್ಯ ಇಬ್ಬರೂ ರಾಜಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಇನ್ನು ಐಎಎಸ್ ಪರೀಕ್ಷೆಯಲ್ಲಿ ಅಗ್ರ ಸ್ಥಾನದಿಂದ ಖ್ಯಾತಿಗಳಿಸಿದ್ದ ಟೀನಾ ಡಾಬಿ ಎರಡನೇ ರ್ಯಾಂಕ್ ಗಳಿಸಿದ್ದ ಅಥರ್ ಖಾನ್ ರನ್ನು ವಿವಾಹವಾಗುವ ಮೂಲಕ ಮತ್ತೆ ಸುದ್ದಿಗೆ ಗ್ರಾಸವಾಗಿದ್ದರು. ಐಎಎಸ್‌ ಟಾಪರ್ಸ್ ಅಂತರ ಧರ್ಮೀಯ ವಿವಾಹವಾಗಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಖ್ಯಾತ ರಾಜಕೀಯ ನಾಯಕರು  ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದ್ದರು. ಹಿಂದೂ ಮಹಾಸಭಾ ಈ ಮದುವೆಯನ್ನು ಲವ್‌ ಜಿಹಾದ್‌ಗೆ ಹೋಲಿಸಿ ಟೀಕಿಸಿತ್ತು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT