ದೇಶ

ಶಾರ್ಜಿಲ್‌ ಇಮಾಮ್, ಉಮರ್ ಖಾಲಿದ್ ನ್ಯಾಯಾಂಗ ಬಂಧನ ಅವಧಿ ನ.23ರ ವರೆಗೆ ವಿಸ್ತರಣೆ

Lingaraj Badiger

ನವದೆಹಲಿ: ದೆಹಲಿಯಲ್ಲಿ ನಡೆದ ಸಿಎಎ ವಿರೋಧಿ ಗಲಭೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಜವಾಹರ್‌ಲಾಲ್‌ ನೆಹರೂ ವಿಶ್ವವಿದ್ಯಾಲಯ(ಜೆಎನ್‌ಯು)ದ ಸಂಶೋಧನಾ ವಿದ್ಯಾರ್ಥಿ ಶಾರ್ಜಿಲ್‌ ಇಮಾಮ್, ಮಾಜಿ ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ನವೆಂಬರ್ 23ರ ವರೆಗೆ ವಿಸ್ತರಿಸಲಾಗಿದೆ.

ಇಬ್ಬರು ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯಗೊಂಡ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫೆರೆನ್ಸ್ ಮೂಲಕ ವಿಚಾರಣೆಗೆ ಹಾಜರುಪಡಿಸಲಾಯಿತು. ಆರೋಪಿಗಳ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಮಿತಾಭ್ ರಾವತ್ ಅವರು, ನ್ಯಾಯಾಂಗ ಬಂಧನ ಅವಧಿಯನ್ನು ಸೋಮವಾರದ ವರೆಗೆ ವಿಸ್ತರಿಸಿದ್ದಾರೆ.

ಈ ವರ್ಷದ ಫೆಬ್ರವರಿಯಲ್ಲಿ ಭುಗಿಲೆದ್ದ ಈಶಾನ್ಯ ದೆಹಲಿ ಗಲಭೆಗೆ ಸಂಬಂಧಿಸಿದಂತೆ, ದೆಹಲಿ ಪೊಲೀಸರು ಕಾನೂನುಬಾಹಿರ ಚಟುವಟಿಕೆಗಳು(ತಡೆಗಟ್ಟುವಿಕೆ) ಕಾಯ್ದೆಯಡಿ ಉಮರ್ ಖಾಲಿದ್ ಹಾಗೂ ಶಾರ್ಜಿಲ್ ಅವರನ್ನು ಬಂಧಿಸಲಾಗಿದೆ.

ಪೌರತ್ವ ತಿದ್ದುಪಡಿ ವಿರೋಧಿ ಪ್ರತಿಭಟನೆ ಸಂದರ್ಭದಲ್ಲಿ ಪ್ರಚೋದನಾಕಾರಿ ಹಾಗೂ ದೇಶದ್ರೋಹದ ಹೇಳಿಕೆ ನೀಡಿದ ಆರೋಪದ ಮೇಲೆ ಆಗಸ್ಟ್ 25 ರಂದು ಬಿಹಾರದ ಜಿಹಾನಬಾದ್ ಜಿಲ್ಲೆಯ ಕಾಕೊ ಬಳಿ ಶಾರ್ಜಿಲ್ ಇಮಾಮ್ ಅವರನ್ನು ಬಂಧಿಸಲಾಗಿತ್ತು. ನಂತರ ಐದು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿತ್ತು.

SCROLL FOR NEXT