ಸೋನಿಯಾ, ರಾಹುಲ್ ಗಾಂಧಿ 
ದೇಶ

ದೆಹಲಿಯಲ್ಲಿ ವಿಪರೀತ ವಾಯುಮಾಲಿನ್ಯ: ಗೋವಾಕ್ಕೆ ಆಗಮಿಸಿದ ಸೋನಿಯಾ ಗಾಂಧಿ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿನ ವಿಪರೀತ ವಾಯುಮಾಲಿನ್ಯ ಸಮಸ್ಯೆಯಿಂದಾಗಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಗೋವಾಕ್ಕೆ ಆಗಮಿಸಿದ್ದಾರೆ. 

ಪಣಜಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿನ ವಿಪರೀತ ವಾಯುಮಾಲಿನ್ಯ ಸಮಸ್ಯೆಯಿಂದಾಗಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಗೋವಾಕ್ಕೆ ಆಗಮಿಸಿದ್ದಾರೆ. 

ವಾಯು ಮಾಲಿನ್ಯ ಕಡಿಮೆ ಇರುವ ಪ್ರದೇಶದಲ್ಲಿ ಸಮಯ ಕಳೆಯುವಂತೆ ಈ ಹಿಂದೆ ವೈದ್ಯರು ನೀಡಿದ್ದ ಸಲಹೆ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಪಣಜಿಗೆ ಆಗಮಿಸಿದ್ದಾರೆ.

ಆಗಸ್ಟ್ ತಿಂಗಳಿನಲ್ಲಿ ಸೋನಿಯಾ ಗಾಂಧಿ ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ಹೆಚ್ಚಿನ ರೀತಿಯ ವೈದ್ಯಕೀಯ ನಿಗಾವಣೆಯಲ್ಲಿದ್ದು, ಅವರ ನಿರಂತರ ಎದೆ ಸೋಂಕಿನ ಬಗ್ಗೆ ವೈದ್ಯರು ಕಳವಳ ವ್ಯಕ್ತಪಡಿಸಿದ್ದರು. ಹೀಗಾಗಿ ಗೋವಾಕ್ಕೆ ಬಂದಿದ್ದಾರೆ, ದೆಹಲಿಯಲ್ಲಿನ ಮಾಲಿನ್ಯದ ಕಾರಣ ಅಲ್ಲ ಎಂದು ಮೂಲಗಳು ತಿಳಿಸಿವೆ.

ದೆಹಲಿಯ ವಾಯುಮಾಲಿನ್ಯವು ಸೋನಿಯಾ ಗಾಂಧಿಗೆ  ಆಸ್ತಮಾ ಮತ್ತು ಎದೆ ಸಮಸ್ಯೆಗೆ ಕಾರಣವಾಗಿದ್ದು, ಅಲ್ಲಿಂದ ಕೆಲಕಾಲ ಬೇರೆಡೆಗೆ ತೆರಳುವಂತೆ ವೈದ್ಯರು ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸೋಲಿನಿಂದ ಕಂಗೆಟ್ಟಿದ ಕೆಲ ನಾಯಕರು, ಪಕ್ಷದ ಕಳಪೆ ಸಾಧನೆ ಬಗ್ಗೆ ಸಮಗ್ರ ಪರಾಮರ್ಶೆ ನಡೆಸುವಂತೆ ಒತ್ತಾಯ ಹೇರಿದ್ದರು. ಈ ನಡುವೆಯೇ ಸೋನಿಯಾ ಗಾಂಧಿ ಗೋವಾಕ್ಕೆ ಆಗಮಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?