ದೇಶ

ದೆಹಲಿಯಲ್ಲಿ ಮತ್ತೆ ಕೊರೋನಾ ಅಬ್ಬರ: ರಾಷ್ಟ್ರ ರಾಜಧಾನಿ ಸಂಪರ್ಕಿಸುವ ರೈಲು, ವಿಮಾನ ನಿಷೇಧಿಸಲು 'ಮಹಾ' ಚಿಂತನೆ

Lingaraj Badiger

ಮುಂಬೈ: ದೆಹಲಿಯಲ್ಲಿ ಮಹಾಮಾರಿ ಕೊರೋನಾ ವೈರಸ್ ಪ್ರಕರಣಗಳು ಮತ್ತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಿಂದ ಬರುವ ಮತ್ತು ಹೋಗುವ ರೈಲು ಹಾಗೂ ವಿಮಾನಗಳನ್ನು ನಿಷೇಧಿಸಲು ಮಹಾರಾಷ್ಟ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಶನಿವಾರ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೊರೋನಾ ವೈರಸ್ ಹರಡುವುದನ್ನು ತಡೆಯಲು ರಾಜ್ಯ ಸರ್ಕಾರ ಪರಿಗಣಿಸುತ್ತಿರುವ ಕ್ರಮಗಳಲ್ಲಿ ಇದು ಒಂದು ಎಂದು ಅವರು ಹೇಳಿದ್ದಾರೆ.

"ರಾಜ್ಯದಲ್ಲಿ ವೈರಸ್ ಹರಡುವುದನ್ನು ತಡೆಯಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲಾಗುತ್ತಿದ್ದು, ದೆಹಲಿಗೆ ಹೋಗುವ ಮತ್ತು ಅಲ್ಲಿಂದ ಬರುವ ರೈಲು ಹಾಗೂ ವಿಮಾನ ಸೇವೆಯನ್ನು ಸ್ಥಗಿತಗೊಳಿಸುವ ಬಗ್ಗೆಯೂ ಚರ್ಚಿಸಲಾಗಿದೆ" ಎಂದು ಸರ್ಕಾರದ ಪ್ರಧಾನ ಕಾರ್ಯದರ್ಶಿ ಸಂಜಯ್ ಕುಮಾರ್ ಅವರು ಪಿಟಿಐಗೆ ತಿಳಿಸಿದ್ದಾರೆ.

ಆದರೆ, ಈ ಬಗ್ಗೆ ಇನ್ನೂ ಯಾವುದೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ" ಎಂದು ಅವರು ಹೇಳಿದ್ದಾರೆ.

ದೆಹಲಿಯಲ್ಲಿ ಕೊರೋನಾ ಮೂರನೇ ಅಲೆ ಆರಂಭವಾಗಿದ್ದು, ಶುಕ್ರವಾರ 6,608 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 5.17 ಲಕ್ಷಕ್ಕೂ ಹೆಚ್ಚಾಗಿದೆ. ಅಲ್ಲದೆ ನಿನ್ನೆ ಒಂದೇ ದಿನ ಕೊರೋನಾಗೆ 118 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 8,159ಕ್ಕೆ ಏರಿಕೆಯಾಗಿದೆ.

SCROLL FOR NEXT