ಸಂಗ್ರಹ ಚಿತ್ರ 
ದೇಶ

ನಗ್ರೋಟಾ ಎನ್ಕೌಂಟರ್: ಪಾಕಿಸ್ತಾನ ರಾಯಭಾರಿಗೆ ಬುಲಾವ್, ಪ್ರಬಲ ಪ್ರತಿಭಟನೆ ವ್ಯಕ್ತಪಡಿಸಿದ ಭಾರತ

ನಗ್ರೋಟಾದಲ್ಲಿ ನಾಲ್ವರು ಉಗ್ರರನ್ನು ಹತ್ಯೆ ಮಾಡಿದ ಘಟನೆಗೆ ತೀವ್ರ ಪ್ರತಿಭಟನೆ ವ್ಯಕ್ತಪಡಿಸಿರುವ ಭಾರತ, ಪಾಕಿಸ್ತಾನ ರಾಯಭಾರಿಗೆ ಸಮನ್ಸ್ ಜಾರಿಗೊಳಿಸಲಾಗಿದೆ ಎಂದು ಕೇಂದ್ರ ವಿದೇಶಾಂಗ ಸಚಿವಾಲಯ ತಿಳಿಸಿದೆ. 

ನವದೆಹಲಿ: ನಗ್ರೋಟಾದಲ್ಲಿ ನಾಲ್ವರು ಉಗ್ರರನ್ನು ಹತ್ಯೆ ಮಾಡಿದ ಘಟನೆಗೆ ತೀವ್ರ ಪ್ರತಿಭಟನೆ ವ್ಯಕ್ತಪಡಿಸಿರುವ ಭಾರತ, ಪಾಕಿಸ್ತಾನ ರಾಯಭಾರಿಗೆ ಸಮನ್ಸ್ ಜಾರಿಗೊಳಿಸಿದೆ ಎಂದು ಶನಿವಾರ ತಿಳಿದುಬಂದಿದೆ. 

ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ಮೂಲಕ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆ ಯೋಜಿಸಿರುವ ಭಯೋತ್ಪಾದಕ ದಾಳಿಯ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. ಪಾಕಿಸ್ತಾನ ಕೂಡಲೇ ತನ್ನ ನೆಲದಲ್ಲಿ ಕಾರ್ಯನಿರ್ವಹಿಸುತ್ತಿರುವ ಉಗ್ರರಿಗೆ ಬೆಂಬಲನೀಡುವುದನ್ನು ನಿಲ್ಲಿಸಬೇಕೆಂದು ಆಗ್ರಹಿಸಿದೆ. 

ಭಾರತ ಸರ್ಕಾರ ದೇಶದ ಭದ್ರತೆಯನ್ನು ಕಾಪಾಡಲು ಎಲ್ಲಾ ರೀತಿಯ ಅಗತ್ಯಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದೆ. 

ಈ ತಿಂಗಳಾಂತ್ಯಕ್ಕೆ ನಡೆಯಲಿರುವ ಕಾಶ್ಮೀರದ ಜಿಲ್ಲಾ ಅಭಿವೃದ್ಧಿ ಮಂಡಳಿ ಚುನಾವಣೆ ವೇಳೆ ಭಾರೀ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ನಾಲ್ವರು ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಭಯೋತ್ಪಾದಕರನ್ನು ಸಿಆರ್'ಪಿಎಫ್ ಯೋಧರು ಎನ್ಕೌಂಟರ್ ನಲ್ಲಿ ಹತ್ಯೆ ಮಾಡಿದ್ದರು. 

ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ ಜಮ್ಮು ನಗರದ ಹೊರವಲಯದ ಟೋಲ್ ಪ್ಲಾಜಾ ಬಳಿ ಪಾಕಿಸ್ತಾನದಿಂದ ಒಳನುಸುಳಿ ಬಂದಿದ್ದ ಉಗ್ರರು ಹಾಗೂ ಭದ್ರತಾಪಡೆಗಳ ನಡುವೆ ಗುರುವಾರ ಭಾರೀ ಗುಂಡಿನ ಚಕಮಕಿ ನಡೆದಿತ್ತು. ಈ ವೇಳೆ ನಾಲ್ವರು ಉಗ್ರರನ್ನು ಭದ್ರತಾಪಡೆಗಳು ಹತ್ಯೆ ಮಾಡಿತ್ತು. ಘಟನೆಯಲ್ಲಿ ಇಬ್ಬರು ಪೊಲೀಸರು ಕೂಡ ಗಂಭೀರವಾಗಿ ಗಾಯಗೊಂಡಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel