ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ 
ದೇಶ

2024ರ ಲೋಕಸಭಾ ಚುನಾವಣೆ ಮೇಲೆ ಕಣ್ಣು: ಮುಂದಿನ ತಿಂಗಳಿನಿಂದ 120 ದಿನಗಳ ಕಾಲ ದೇಶಾದ್ಯಂತ ನಡ್ಡಾ ಪ್ರವಾಸ

 2024ರ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟು ಪಕ್ಷ ಸಂಘಟನೆ ನಿಟ್ಟಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಮುಂದಿನ ತಿಂಗಳಿನಿಂದ 120 ದಿನಗಳ ಕಾಲ ರಾಷ್ಟ್ರದಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ.

ನವದೆಹಲಿ: 2024ರ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟು ಪಕ್ಷ ಸಂಘಟನೆ ನಿಟ್ಟಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಮುಂದಿನ ತಿಂಗಳಿನಿಂದ 120 ದಿನಗಳ ಕಾಲ ರಾಷ್ಟ್ರದಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ.

ಡಿಸೆಂಬರ್ ಮೊದಲ ವಾರದಿಂದ ಜೆ. ಪಿ. ನಡ್ಡಾ ಪ್ರವಾಸ ಆರಂಭಿಸಲಿದ್ದು, ಉತ್ತರ್ ಖಂಡ್ ಮೊದಲ ರಾಜ್ಯವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಸುದ್ದಿಗಾರರಿಗೆ ತಿಳಿಸಿದರು. 

ಡಿಸೆಂಬರ್ 5ರಿಂದ ಜೆ. ಪಿ. ನಡ್ಡಾ ಪ್ರವಾಸ ಆರಂಭಿಸುವ ಸಾಧ್ಯತೆಯಿದ್ದು, ಪ್ರತಿಯೊಂದು ರಾಜ್ಯಕ್ಕೂ ಭೇಟಿ ನೀಡಿ, ಎಲ್ಲಾ ಬೂತ್ ಮಟ್ಟದ ಮುಖ್ಯಸ್ಥರೊಂದಿಗೆ ವರ್ಚುಯಲ್ ಸಭೆ ನಡೆಸಲಿದ್ದಾರೆ. ಪ್ರತಿಯೊಂದು ರಾಜ್ಯದ ಜಿಲ್ಲಾ ಮುಖ್ಯಸ್ಥರು ಸೇರಿದಂತೆ ಹಿರಿಯ ಮುಖಂಡರು ಮಾತ್ರವಲ್ಲದೇ, ಪಕ್ಷದ ಶಾಸಕರು ಹಾಗೂ ಸಂಸದರನ್ನು ಭೇಟಿ ಮಾಡಲಿದ್ದಾರೆ ಎಂದು ಅವರು ಹೇಳಿದರು.

ಪ್ರವಾಸದ ವೇಳೆಯಲ್ಲಿ 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸದ ಲೋಕಸಭಾ ಕ್ಷೇತ್ರಗಳು ಹಾಗೂ ವಲಯಗಳಲ್ಲಿ ಪಕ್ಷ ಸಂಘಟನೆ ನಿಟ್ಟಿನಲ್ಲಿ ಪಕ್ಷದ ಮುಖಂಡರೊಂದಿಗೆ ಕಾರ್ಯತಂತ್ರ ರೂಪಿಸಲಿದ್ದಾರೆ ಎಂದು ಅವರು ತಿಳಿಸಿದರು.

ಮುಂದಿನ ವರ್ಷ ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಮತ್ತು ಅಸ್ಸಾಂನಲ್ಲಿ ಚುನಾವಣೆಗಾಗಿ ಪಕ್ಷದ ಸಿದ್ಧತೆಯನ್ನು ಅವರು ಪರಿಶೀಲನೆ ನಡೆಸಲಿದ್ದಾರೆ ಎಂದು ಅರುಣ್ ಸಿಂಗ್ ಮಾಹಿತಿ ನೀಡಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!