ಭಾರತಿ ಸಿಂಗ್ 
ದೇಶ

ಡ್ರಗ್ಸ್ ಪ್ರಕರಣ: ಹಾಸ್ಯ ನಟಿ ಭಾರತಿ ಸಿಂಗ್, ಪತಿ ಹರ್ಷ್ ಗೆ ಜಾಮೀನು

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್‌ಸಿಬಿ) ಅಧಿಕಾರಿಗಳಿಂದ ಶನಿವಾರ ಬಂಧನಕ್ಕೊಳಗಾಗಿದ್ದ ಹಾಸ್ಯನಟಿ ಭಾರತಿ ಸಿಂಗ್ ಹಾಗೂ ಅವರ ಪತಿ ಹರ್ಷ್ ಲಿಂಬಾಚಿಯಾ ಅವರಿಗೆ ಮುಂಬೈ ಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ.

ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್‌ಸಿಬಿ) ಅಧಿಕಾರಿಗಳಿಂದ ಶನಿವಾರ ಬಂಧನಕ್ಕೊಳಗಾಗಿದ್ದ ಹಾಸ್ಯನಟಿ ಭಾರತಿ ಸಿಂಗ್ ಹಾಗೂ ಅವರ ಪತಿ ಹರ್ಷ್ ಲಿಂಬಾಚಿಯಾ ಅವರಿಗೆ ಮುಂಬೈ ಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ.

ದಂಪತಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಮ್ಯಾಜಿಸ್ಟ್ರೇಟ್ ಕೋರ್ಟ್, ಭಾರತಿ ಸಿಂಗ್ ಹಾಗೂ ಅವರ ಪತಿ ಹರ್ಷ್ ಅವರಿಗೆ ತಲಾ 15 ಸಾವಿರ ರೂಪಾಯಿ ಬಾಂಡ್ ಮೇಲೆ ಜಾಮೀನು ನೀಡಿದೆ.

ನಟಿ ಭಾರತಿ ಹಾಗೂ ಅವರ ಪತಿ ಮಾದಕ ಪದಾರ್ಥ ಸೇವಿಸುತ್ತಾರೆ ಎಂಬ ನಿಖರ ಮಾಹಿತಿ ಮೇಲೆ ಶನಿವಾರ ಎನ್ ಸಿಬಿ ಅಧಿಕಾರಿಗಳು ಅವರ ಮನೆ ಮೇಲೆ ದಾಳಿ ನಡೆಸಿದ್ದರು. ದಾಳಿ ವೇಳೆ ಡ್ರಗ್ಸ್ ಪತ್ತೆಯಾದ ಹಿನ್ನೆಲೆಯಲ್ಲಿ ದಂಪತಿಯನ್ನು ಬಂಧಿಸಲಾಗಿತ್ತು.

ಮಾದಕ ಪದಾರ್ಥಗಳಿಗೆ ಸಂಬಂಧಿಸಿದಂತೆ ಎನ್ ಸಿಬಿ ಇತ್ತೀಚಿನ ದಿನಗಳಲ್ಲಿ ಬಾಲಿವುಡ್ ಪ್ರಸಿದ್ದ ವ್ಯಕ್ತಿಗಳ ಮನೆಗಳಲ್ಲಿ ಸರಣಿ ಶೋಧ ನಡೆಸುತ್ತಿದೆ. ಈ ತಿಂಗಳ ಆರಂಭದಲ್ಲಿ ಎನ್‌ ಸಿ ಬಿ, ನಟ ಅರ್ಜುನ್ ರಾಂಪಾಲ್, ನಿರ್ಮಾಪಕ ಫಿರೋಜ್ ನಾಡಿಯಾವಾಲಾ ಅವರ ಮನೆಗಳ ಮೇಲೆ ದಾಳಿ ನಡೆಸಿತ್ತು.

ಜಾರಿ ನಿರ್ದೇಶನಾಲಯ (ಇಡಿ) ನೀಡಿದ ಮಾಹಿತಿಯಂತೆ ಡ್ರಗ್ಸ್ ಬಳಸುತ್ತಿರುವ ಬಾಲಿವುಡ್ ಸೆಲೆಬ್ರಿಟಿಗಳನ್ನು ಗುರಿಯಾಗಿಸಿಕೊಂಡು ಎನ್ ಸಿಬಿ ದಾಳಿ ನಡೆಸುತ್ತಿದೆ. ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಮಾಡಿಕೊಂಡ ನಂತರ ಬಾಲಿವುಡ್‌ನಲ್ಲಿ ಡ್ರಗ್ ಮಾಫಿಯಾ ಹಗರಣ ಸ್ಫೋಟಗೊಂಡಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಶಾಂತ್ ಗೆಳತಿ ರಿಯಾ ಚಕ್ರವರ್ತಿ ಅವರನ್ನು ಸೆಪ್ಟೆಂಬರ್ 9 ರಂದು ಎನ್‌ಸಿಬಿ ಬಂಧಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಮೊಜ್ತಾಬಾ ಖಮೇನಿ ಜೀವಂತವಾಗಿ ಇದ್ದಾರೋ ಅಥವಾ ಇಲ್ಲವೋ? ಆತಂಕದ ಹಳೆಯ Video ಬಿಡುಗಡೆ ಮಾಡಿದ ಇರಾನ್!