ಸಂಗ್ರಹ ಚಿತ್ರ 
ದೇಶ

ಕೋವಿಡ್-19: 50 ಸಾವಿರಕ್ಕೂ ಅಧಿಕ ಸಕ್ರಿಯ ಪ್ರಕರಣಗಳ ಪಟ್ಟಿಯಲ್ಲಿ ಮಹಾರಾಷ್ಟ್ರಕ್ಕೆ ಅಗ್ರ ಸ್ಥಾನ, 2ನೇ ಸ್ಥಾನದಲ್ಲಿ ಕೇರಳ

ದೇಶದಲ್ಲಿ ಮಾರಕ ಕೊರೋನಾ ವೈರಸ್ ನ 2ನೇ ಅಲೆ ಕ್ರಮೇಣ ಆರಂಭವಾಗುತ್ತಿದ್ದು, ದೆಹಲಿ, ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡಬರುತ್ತಿದೆ.

ನವದೆಹಲಿ: ದೇಶದಲ್ಲಿ ಮಾರಕ ಕೊರೋನಾ ವೈರಸ್ ನ 2ನೇ ಅಲೆ ಕ್ರಮೇಣ ಆರಂಭವಾಗುತ್ತಿದ್ದು, ದೆಹಲಿ, ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡಬರುತ್ತಿದೆ.

ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ದೇಶದಲ್ಲಿ ಅತೀ ಹೆಚ್ಚು ಸಕ್ರಿಯ ಪ್ರಕರಣಗಳನ್ನು ಹೊಂದಿರುವ ರಾಜ್ಯಗಳ ಪಟ್ಟಿಯಲ್ಲಿ ಮಹಾರಾಷ್ಟ್ರ ಮತ್ತು ಕೇರಳ ಅಗ್ರ 2 ಸ್ಥಾನಗಳಲ್ಲಿವೆ. ಅಗ್ರ ಸ್ಥಾನದಲ್ಲಿರುವ ಮಹಾರಾಷ್ಟ್ರದಲ್ಲಿ 80, 878 ಸಕ್ರಿಯ ಪ್ರಕಣಗಳಿದ್ದು, 2ನೇ ಸ್ಥಾನದಲ್ಲಿರುವ ಕೇರಳದಲ್ಲಿ 66,982  ಸಕ್ರಿಯ ಪ್ರಕರಣಗಳಿವೆ ಎಂದು ಹೇಳಿದೆ.

ಟಾಪ್ 10 ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ
ಇನ್ನು ಅತೀ ಹೆಚ್ಚು ಸಕ್ರಿಯ ಪ್ರಕರಣಗಳನ್ನು ಹೊಂದಿರುವ ಟಾಪ್ 10 ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕವಿದ್ದು, ಮಹಾರಾಷ್ಟ್ರ, ಕೇರಳದ ಬಳಿಕ ಅತೀಹೆಚ್ಚು ಸಕ್ರಿಯ ಪ್ರಕರಣಗಳನ್ನು ಹೊಂದಿರುವ ರಾಜ್ಯ ಎಂದರೆ ಅದು ದೆಹಲಿ. ರಾಜಧಾನಿ ದೆಹಲಿಯಲ್ಲಿ 39,741 ಸಕ್ರಿಯ ಪ್ರಕರಣಗಳಿದ್ದು, ನಂತರದ ಸ್ಥಾನದಲ್ಲಿರುವ  ಪಶ್ಚಿಮ ಬಂಗಾಳದಲ್ಲಿ 25,391, ಕರ್ನಾಟಕದಲ್ಲಿ 24,733 ಸಕ್ರಿಯ ಪ್ರಕರಣಗಳಿವೆ.

ಉಳಿದಂತೆ ಉತ್ತರ ಪ್ರದೇಶದಲ್ಲಿ 23,471, ರಾಜಸ್ಥಾನದಲ್ಲಿ 21,951, ಛತ್ತೀಸ್ ಗಢದಲ್ಲಿ 20,659, ಹರ್ಯಾಣದಲ್ಲಿ 20,325, ಆಂಧ್ರ ಪ್ರದೇಶದಲ್ಲಿ 14,770, ತಮಿಳುನಾಡಿನಲ್ಲಿ 13,285, ಗುಜರಾತ್ ನಲ್ಲಿ 12,916, ತೆಲಂಗಾಣದಲ್ಲಿ 11,643 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್