ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಅಸ್ಸಾಂ ಮಾಜಿ ಸಿಎಂ ತರುಣ್ ಗೊಗೊಯಿ ನಿಧನ

ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯಿ ಅವರು ನಿಧನರಾಗಿದ್ದಾರೆ.

ತರುಣ್ ಗೊಗೊಯ್
Vishwanath S
Updated On : 23 Nov 2020, 6:32 pm

ನವದೆಹಲಿ: ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯಿ ಅವರು ನಿಧನರಾಗಿದ್ದಾರೆ. 

84 ವರ್ಷದ ತರುಣ್ ಗೊಗೊಯಿ ಅವರು ವಿಧಿವಶರಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಸಚಿವ ಹಿಮಂತ ಬಿಸ್ವಾ ಶರ್ಮಾ ಪ್ರಕಟಿಸಿದ್ದಾರೆ.

ಕಾಂಗ್ರೆಸ್ ಮುಖಂಡರು ಗೌಹತಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನವೆಂಬರ್ 2ರಿಂದ ಕೊರೋನಾ ನಂತರದ ತೊಂದರೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.

Advertisement

Advertisement

ಎರಡು ತಿಂಗಳ ಚಿಕಿತ್ಸೆ ಬಳಿಕ ಕೊರೋನಾದಿಂದ ಚೇತರಿಸಿಕೊಂಡಿದ್ದ ತರುಣ್ ಗೊಗೊಯಿ ಅವರು ಅಕ್ಟೋಬರ್ 25ರಂದು ಬಿಡುಗಡೆಯಾಗಿದ್ದರು. ಆದರೆ ಕೊರೋನಾ ಬಳಿಕದ ಸಮಸ್ಯೆಗಳಿಗೀಡಾಗಿದ್ದ ತರುಣ್ ಗೊಗೊಯಿ ಅವರು ನ. 2ರಂದು ಆಸ್ಪತ್ರೆಗೆ ದಾಖಲಾಗಿದ್ದರು.

ತರುಣ್ ಗೊಗೊಯಿ ಅವರು ಮೂರು ಭಾರಿ ಅಸ್ಸಾಂ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement