ನಟಿ ವಿಜಯಶಾಂತಿ 
ದೇಶ

ಚಿತ್ರ ನಟಿ ವಿಜಯಶಾಂತಿ ನಾಳೆ ದೆಹಲಿಯಲ್ಲಿ ಬಿಜೆಪಿ ಸೇರ್ಪಡೆ ಸಾಧ್ಯತೆ

ಹಲವು ತಿಂಗಳ ಊಹಾಪೋಹಗಳ ನಂತರ ಕಾಂಗ್ರೆಸ್ ಸ್ಟಾರ್ ಪ್ರಚಾರಕಿ ಮತ್ತು ಮಾಜಿ ಸಂಸದೆ ವಿಜಯ ಶಾಂತಿ ನಾಳೆ ದೆಹಲಿಗೆ ತೆರಳಲಿದ್ದು,  ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆ ಬಹುತೇಕ ಖಾತ್ರಿಯಾಗಿದೆ.

ನವದೆಹಲಿ: ಹಲವು ತಿಂಗಳ ಊಹಾಪೋಹಗಳ ನಂತರ ಕಾಂಗ್ರೆಸ್ ಸ್ಟಾರ್ ಪ್ರಚಾರಕಿ ಮತ್ತು ಮಾಜಿ ಸಂಸದೆ ವಿಜಯ ಶಾಂತಿ ನಾಳೆ ದೆಹಲಿಗೆ ತೆರಳಲಿದ್ದು,  ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆ ಬಹುತೇಕ ಖಾತ್ರಿಯಾಗಿದೆ.

ವಿಜಯಶಾಂತಿ ಬಿಜೆಪಿಗೆ ಮತ್ತೆ ಸೇರ್ಪಡೆಯಾಗುತ್ತಿರುವುದರಿಂದ ಡಿಸೆಂಬರ್ 1 ರಂದು ನಡೆಯಲಿರುವ ಜಿಹೆಚ್ ಎಂಸಿಯ 150 ವಾರ್ಡ್ ಗಳ ಚುನಾವಣೆಯ ಪ್ರಚಾರಕ್ಕೆ  ಬಲ ಬಂದಂತಾಗಿದೆ.

ವಿಜಯ ಶಾಂತಿ ಬಿಜೆಪಿಗೆ ಸೇರ್ಪಡೆಯಾದರೆ ರಾಷ್ಟ್ರೀಯ ಮಟ್ಟದಲ್ಲಿ ಪಕ್ಷದಲ್ಲಿ ಉನ್ನತ ಸ್ಥಾನ ಪಡೆಯಲಿದ್ದಾರೆ. ಪಕ್ಷದಲ್ಲಿ ಎರಡನೇ ಉನ್ನತ ನಾಯಕರಾದ ಅಮಿತ್ ಶಾ ಅವರ ಸಮ್ಮುಖದಲ್ಲಿ ವಿಜಯ ಶಾಂತಿ ಬಿಜೆಪಿಗೆ ಸೇರಲಿದ್ದಾರೆ ಎಂದು ಅವರ ಆಪ್ತ ಮೂಲಗಳಿಂದ ತಿಳಿದುಬಂದಿದೆ.

ವಿಜಯಶಾಂತಿ ಬಿಜೆಪಿ ಸೇರ್ಪೆಯಾಗುತ್ತಿದ್ದಂತೆ ಮುಂಬರುವ ಜಿಹೆಚ್ ಎಂಸಿ ಚುನಾವಣೆ ತದನಂತರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಪರ ಪ್ರಚಾರ ನಡೆಸಲಿದ್ದಾರೆ. 

80 ಹಾಗೂ 90ರ ದಶಕದಲ್ಲಿ ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ಮಿಂಚಿದ್ದ ವಿಜಯ ಶಾಂತಿ ಧೀರ್ಘಕಾಲದ ವಿರಾಮದ ಬಳಿಕ ಮಹೇಶ್ ಬಾಬು ಅವರ  ಸರಿಲೇರು ನೀಕೇವರ ’ಚಿತ್ರದ ಮೂಲಕ ಮತ್ತೆ ಟಾಲಿವುಡ್ ಗೆ ಕಮ್ ಬ್ಯಾಕ್ ಆಗಿದ್ದರು.

ಪ್ರಸ್ತುತ ಕಾಂಗ್ರೆಸ್ ನಲ್ಲಿ ಭವಿಷ್ಯ ಮಂಕಾಗಿರುವ ಪ್ರಸಿದ್ಧ ಮುಖಂಡರನ್ನು ಪಕ್ಷದತ್ತ ಸೆಳೆಯಲು ಬಿಜೆಪಿ ವಿವೇಚನೆಯುಕ್ತವಾಗಿ ಪ್ರಯತ್ನಿಸುತ್ತಲೇ ಬಂದಿದ್ದು, ಇದೀಗ ವಿಜಯಶಾಂತಿ ಅವರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT