ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 37,975 ಹೊಸ ಸೋಂಕು ಪ್ರಕರಣಗಳು ಪತ್ತೆ!

ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 37,975 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 91,77,841ಕ್ಕೆ ಏರಿಕೆಯಾಗಿದೆ.

ಸಂಗ್ರಹ ಚಿತ್ರ
Srinivasa Murthy VN
Updated On : 24 Nov 2020, 12:24 pm

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 37,975 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 91,77,841ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 37,975 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 91,77,841ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ದೇಶಾದ್ಯಂತ 480 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೊರೋನಾ ಸೋಂಕಿಗೆ  ಬಲಿಯಾದವರ ಸಂಖ್ಯೆ 1,34,218ಕ್ಕೆ ಏರಿಕೆಯಾಗಿದೆ.

ಇನ್ನು ನಿನ್ನೆ ಒಂದೇ ದಿನ 42,314 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 86,04,955ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ ಪ್ರಸ್ತುತ 4,38,667 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement