ಹುಲಿ ದಾಳಿ 
ದೇಶ

ಗ್ರಾಮಕ್ಕೆ ನುಗ್ಗಿ ಗ್ರಾಮಸ್ಥರನ್ನು ಅಟ್ಟಾಡಿಸಿದ ಹುಲಿ, ಇಬ್ಬರಿಗೆ ಗಾಯ!

ಅಸ್ಸಾಂ ಕಾಜಿರಂಗ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿನ ಹುಲಿಯೊಂದು ಸಮೀಪದ ಗ್ರಾಮಕ್ಕೆ ನುಗ್ಗಿದ್ದು, ಇಡೀ ಗ್ರಾಮಸ್ಥರನ್ನು ಅಟ್ಟಾಡಿಸಿದೆ.

ತೇಜ್ ಪುರ: ಅಸ್ಸಾಂ ಕಾಜಿರಂಗ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿನ ಹುಲಿಯೊಂದು ಸಮೀಪದ ಗ್ರಾಮಕ್ಕೆ ನುಗ್ಗಿದ್ದು, ಇಡೀ ಗ್ರಾಮಸ್ಥರನ್ನು ಅಟ್ಟಾಡಿಸಿದೆ.

ಹೌದು..ಕಾಜಿರಂಗ ಅರಣ್ಯ ಪ್ರದೇಶಕ್ಕೆ ಸಮೀಪದಲ್ಲೇ ಇರುವ ತೇಜ್ ಪುರ ವಿಶ್ವ ವಿದ್ಯಾಲಯದ ಸಮೀಪದ ನಾಪಮ್ ಪ್ರದೇಶಕ್ಕೆ ನುಗ್ಗಿದ್ದ ಹುಲಿಯೊಂದು ಇಲ್ಲಿನ ನಿವಾಸಿಗಳನ್ನು ಅಟ್ಟಾಡಿಸಿದ್ದು, ಈ ವೇಳೆ ಇಬ್ಬರು ಗ್ರಾಮಸ್ಥರಿಗೆ ಗಾಯಗಳಾಗಿವೆ.

ಹುಲಿ ಗ್ರಾಮಕ್ಕೆ ಬಂದು ಅಲ್ಲಿ ದೈನಂದಿನ ಕೆಲಸ ಕಾರ್ಯಕ್ಕೆ ತೆರಳುತ್ತಿದ್ದವರ ಮೇಲೆ ಏಕಾಏಕಿ ಎರಗಿದೆ. ಹುಲಿಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಗ್ರಾಮಸ್ಥರು ದಿಕ್ಕಾಪಾಲಾಗಿ ಓಡಿದ್ದು ಈ ವೇಳೆ ಇಬ್ಬರಿಗೆ ಗಾಯಗಳಾಗಿವೆ. ವಿಚಾರ ತಿಳಿಯುತ್ತಿದ್ದಂತೆಯೇ ಅರಣ್ಯಾಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಹುಲಿಯ  ಮಾರ್ಗವನ್ನು ಮರಳಿಸಿದ್ದಾರೆ. ಅಲ್ಲದೆ ಹುಲಿಯ ಗ್ರಾಮದ ಸಮೀಪಕ್ಕೆ ತೆರಳದಂತೆ ಕಾರ್ಯಾಚರಣೆ ನಡೆಸುತ್ತಿದ್ದು, ಹುಲಿ ಅರಣ್ಯಕ್ಕೆ ಮರಳುವಂತೆ ಅದರ ಮಾರ್ಗಗಳನ್ನು ಬಂದ್ ಮಾಡಿದ್ದಾರೆ. ಅಂತೆಯೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಶೀಘ್ರದಲ್ಲೇ ಹುಲಿಯನ್ನು ಕಾಡಿಗೆ ಅಟ್ಟುವುದಾಗಿ ಅಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇನ್ನು ಹುಲಿ ಗ್ರಾಮಸ್ಥರನ್ನು ಅಟ್ಟಾಡಿಸಿರುವ ದೃಶ್ಯಾವಳಿಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳ ಚುನಾವಣೆ: ರಾಜಕೀಯ ಪಕ್ಷಗಳ ಖರ್ಚು- ದೇಣಿಗೆ ಮಾಹಿತಿ ಬಹಿರಂಗ; ಆಡಳಿತಾರೂಢ ಬಿಜೆಪಿಗೆ ಬಂದಿದ್ದೆಷ್ಟು?

ಈ ದಶಕದ ಅಂತ್ಯಕ್ಕೆ AI ನಮ್ಮನ್ನೆಲ್ಲಾ ಕೊಲ್ಲುತ್ತೆ: Anthropic ಸಂಶೋಧಕನ ರಾಜೀನಾಮೆ; ಸುರಕ್ಷತಾ ಕಾರ್ಯನಿರ್ವಾಹಕರಿಂದಲೂ ಬೆಂಬಲ!

ಸಂಘರ್ಷ ಮತ್ತಷ್ಟು ತೀವ್ರ: ಇಂಧನ ಟ್ಯಾಂಕರ್ ಗಳ ಮೇಲಿನ ದಾಳಿಗೆ ಸೇಡು, ಅಮೆರಿಕದ Submarine ಸೀಜ್ ಮಾಡಿದ ಇರಾನ್!

ಸಂಸಾರ, ಸಿಮ್ ಕಾರ್ಡ್, CID ಬಲೆ: ನಾಪತ್ತೆಯಾಗಿದ್ದ ಬೆಂಗಳೂರಿನ ಕಾಲೇಜು ವಿದ್ಯಾರ್ಥಿನಿಯರು 8 ತಿಂಗಳ ಬಳಿಕ ಪತ್ತೆ; ಒಬ್ಬಳು ಗರ್ಭಿಣಿ!

KBCಗೆ ಅಮಿತಾಬ್ ಬಚ್ಚನ್ ವಿದಾಯ? ಈ ಬಗ್ಗೆ ಬಿಗ್ ಬಿ ಹೇಳಿದ್ದೇನು?