ದೇಶ

ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ, ಭರಪೂರ ಭರವಸೆ

Lingaraj Badiger

ಹೈದರಾಬಾದ್:  ಡಿಸೆಂಬರ್ 1 ರಂದು ನಡೆಯಲಿರುವ ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ(ಜಿಎಚ್‌ಎಂಸಿ) ಚುನಾವಣೆಗೆ ಬಿಜೆಪಿ ಗುರುವಾರ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, 28 ಸಾವಿರ ಉದ್ದೋಗ ಹಾಗೂ ಮಹಿಳೆಯರಿಗೆ ಉಚಿತ ಪ್ರಯಾಣ ಸೇರಿದಂತೆ ಹಲವು ಭರವಸೆಗಳನ್ನು ನೀಡಿದೆ.

ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹಾಗೂ ಇತರೆ ಹಿರಿಯ ನಾಯಕರು ಇಂದು ನಗರದಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದರು.

ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಹಂದರೆ, ಕೊರೋನಾ ವ್ಯಾಕ್ಸಿನೇಷನ್ ತಂತ್ರವನ್ನು ಯೋಜಿತ ರೀತಿಯಲ್ಲಿ ಅಳವಡಿಸಿಕೊಳ್ಳಲಾಗುವುದು ಲೇಔಟ್ ರೆಗ್ಯುಲರೈಸೇಶನ್ ಸ್ಕೀಮ್ (ಎಲ್‌ಆರ್‌ಎಸ್) ಅನ್ನು ರದ್ದುಪಡಿಸುವುದಾಗಿ ಭರವಸೆ ನೀಡಲಾಗಿದೆ.

ರಾಜ್ಯ ಸರ್ಕಾರದ ಹಸ್ತಕ್ಷೇಪವಿಲ್ಲದೆ ಪ್ರಧಾನ್ ಮಂತ್ರಿ ಆವಾಸ್ ಯೋಜನೆ ಯೋಜನೆಯಡಿ 1 ಲಕ್ಷ ಮನೆಗಳನ್ನು ನೇರವಾಗಿ ಫಲಾನುಭವಿಗಳಿ ವರ್ಗಾವಣೆ(ಡಿಬಿಟಿ) ಮಾಡುವುದಾಗಿ ಬಿಜೆಪಿ ಭರವಸೆ ನೀಡಿದೆ.

ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ನಂತರ ಮಾತನಾಡಿದ ಫಡ್ನವೀಸ್ ಅವರು, ಸೆಪ್ಟೆಂಬರ್ 17 ರಂದು ತೆಲಂಗಾಣ ವಿಮೋಚನಾ ದಿನವನ್ನು ಅಧಿಕೃತವಾಗಿ ಆಚರಿಸದ ಕೆ ಚಂದ್ರಶೇಖರ್ ರಾವ್ ನೇತೃತ್ವದ ಟಿಆರ್ ಎಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

SCROLL FOR NEXT