ದೇಶ

ಐಐಟಿ, ಎನ್ ಐಟಿಗಳಲ್ಲಿ ಮುಂದಿನ ವರ್ಷದಿಂದ ಮಾತೃಭಾಷೆಯಲ್ಲಿ ಇಂಜಿನಿಯರಿಂಗ್ ಶಿಕ್ಷಣ

Srinivas Rao BV

ನವದೆಹಲಿ: ಮುಂದಿನ ಶೈಕ್ಷಣಿಕ ವರ್ಷದಿಂದ ಇಂಜಿನಿಯರಿಂಗ್ ಶಿಕ್ಷಣವನ್ನು ಮಾತೃಭಾಷೆಯಲ್ಲಿ ನೀಡಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಈ ಯೋಜನೆಯ ಭಾಗವಾಗಿ ಕೆಲವು ಐಐಟಿ-ಎನ್ ಐಟಿ ಗಳನ್ನು ಆಯ್ಕೆ ಮಾಡಲಾಗಿದೆ. ಮಾತೃಭಾಷೆಯಲ್ಲಿ ಶಿಕ್ಷಣ ನೀಡುವುದು ಈ ವರ್ಷ ಕೇಂದ್ರ ಸರ್ಕಾರ ಅಳವಡಿಸಿಕೊಂಡಿರುವ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ)ಯ ಭಾಗವಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ತಿಳಿಸಿದೆ.

ಸಚಿವಾಲಯದ ಯೋಜನೆಯ ಪರಿಶೀಲನಾ ಸಭೆಯಲ್ಲಿ ಮಾತನಾಡಿರುವ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್, ವಿದ್ಯಾರ್ಥಿವೇತನ ಹಾಗೂ ಫೆಲೋಶಿಪ್ ಗಳನ್ನು ಸರಿಯಾದ ಸಮಯಕ್ಕೆ ವಿತರಣೆ ಮಾಡಲು ಯುಜಿಸಿಗೆ ನಿರ್ದೇಶನ ನೀಡಿದ್ದಾರೆ.

ತಾಂತ್ರಿಕ ಶಿಕ್ಷಣ ಪ್ರಮುಖವಾಗಿ ಇಂಜಿನಿಯರಿಂಗ್ ಕೋರ್ಸ್ ಗಳನ್ನು ಮಾತೃಭಾಷೆಯಲ್ಲಿ ಕಲಿಸಲು ನಿರ್ಧರಿಸಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರಲಿದೆ ಎಂದು ಸಚಿವಾಲಯ ತಿಳಿಸಿದೆ.

SCROLL FOR NEXT