ದೇಶ

ಕೋವಿಡ್-19: ದೇಶದಲ್ಲಿಂದು 44,489 ಕೊರೋನಾ ಕೇಸ್ ಪತ್ತೆ, 524 ಮಂದಿ ಸಾವು

Manjula VN

ನವದೆಹಲಿ: ದೇಶದಲ್ಲಿ ಗುರುವಾರ 44,489 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 92,66,706ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಇನ್ನು ಕಳೆದ 24 ಗಂಟೆಗಳಲ್ಲಿ 524 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 1,35,223ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ. 

ಈ ನಡುವೆ ಒಟ್ಟಾರೆ 92,66,706 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 36,367 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಇದರೊಂದಿಗೆ ಈ ವರೆಗೂ ಗುಣಮುಖರಾದವರ ಸಂಖ್ಯೆ 86,79,138ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 4,52,344 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ. 

ಇನ್ನು ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 10,90,238 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 13,59,31,545 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

SCROLL FOR NEXT