ಲಾಲ್ಡುಹೋಮಾ 
ದೇಶ

ಸ್ವತಂತ್ರ ಶಾಸಕ ಲಾಲ್ಡುಹೋಮಾ ಅನರ್ಹಗೊಳಿಸಿದ ಮಿಜೋರಾಂ ಅಸ್ಲೆಂಬಿ!

ಮಿಜೋರಾಂನ ಸ್ವತಂತ್ರ ಶಾಸಕ ಲಾಲ್ಡುಹೋಮಾ ಅವರನ್ನು ವಿಧಾನಸಭೆ ಸ್ಪೀಕರ್ ಲಾಲ್ರಿನ್ಲಿಯಾನಾ ಸೈಲೊ ಅವರನ್ನು ಅನರ್ಹಗೊಳಿಸಿದ್ದಾರೆ.

ಗುವಾಹಟಿ: ಮಿಜೋರಾಂನ ಸ್ವತಂತ್ರ ಶಾಸಕ ಲಾಲ್ಡುಹೋಮಾ ಅವರನ್ನು ವಿಧಾನಸಭೆ ಸ್ಪೀಕರ್ ಲಾಲ್ರಿನ್ಲಿಯಾನಾ ಸೈಲೊ ಅವರನ್ನು ಅನರ್ಹಗೊಳಿಸಿದ್ದಾರೆ.

ರಾಜಕೀಯ ಪಕ್ಷದ ಜೋರಾಮ್ ಪೀಪಲ್ಸ್ ಮೂವ್‌ಮೆಂಟ್(ಝಡ್‌ಪಿಎಂ)ನ ಪ್ರತಿನಿಧಿಯಾಗಿ ತಮ್ಮನ್ನು ತಾವು ಘೋಷಿಸಿಕೊಂಡಿದ್ದರಿಂದ 71 ವರ್ಷದ ಅವರನ್ನು ಶಾಸಕರಾಗಿ ಅನರ್ಹಗೊಳಿಸಲಾಯಿತು. 2018ರ ಚುನಾವಣೆಯಲ್ಲಿ ಲಾಲ್ಡುಹೋಮಾ ಸರ್ಚಿಪ್ ಕ್ಷೇತ್ರದಿಂದ ಸ್ವತಂತ್ರರಾಗಿ ಗೆಲುವು ಸಾಧಿಸಿದ್ದರು.

ಸ್ವತಂತ್ರ ಶಾಸಕರಾಗಿ ಆಯ್ಕೆಯಾಗಿದ್ದರೂ ಅವರು ಝಡ್ ಪಿಎಂ ಅಭ್ಯರ್ಥಿ ಎಂದು ಘೋಷಿಸಿಕೊಂಡಿದ್ದರಿಂದ ಅವರು ಶಾಸಕ ಸ್ಥಾನವನ್ನು ಕಳೆದುಕೊಂಡರು ಎಂದು ಸ್ಪೀಕರ್ ಹೇಳಿದರು.

ವಿಶೇಷವೆಂದರೆ, ಲಾಲ್ಡುಹೋಮಾ 32 ವರ್ಷಗಳ ಹಿಂದೆ ಸಂಸದರಾಗಿ ಸೇವೆ ಸಲ್ಲಿಸುತ್ತಿದ್ದಾಗ ಇದೇ ರೀತಿ ಘಟನೆ ನಡೆದಿತ್ತು. ಐಪಿಎಸ್ ಅಧಿಕಾರಿಯಾಗಿದ್ದ ಲಾಲ್ಡುಹೋಮಾ ಅವರು 1988ರಲ್ಲಿ ತನ್ನ ಮಾತೃ ಪಕ್ಷ ಕಾಂಗ್ರೆಸ್(ಐ) ಸದಸ್ಯತ್ವವನ್ನು ತ್ಯಜಿಸಿದ್ದಕ್ಕಾಗಿ ಅನರ್ಹಗೊಳಿಸಲಾಯಿತು. ಸಂಸದರಾಗಿ ಮತ್ತು ಶಾಸಕರಾಗಿ ಅನರ್ಹತೆಯನ್ನು ಅನುಭವಿಸಿದ ಏಕೈಕ ರಾಜಕಾರಣಿಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel