ದೇಶ

ಮೆಹಬೂಬಾ ಮುಫ್ತಿ ಅವರನ್ನು ಬಂಧಿಸಲಾಗಿಲ್ಲ: ಜಮ್ಮು-ಕಾಶ್ಮೀರ ಚುನಾವಣಾ ಆಯುಕ್ತ 

Srinivas Rao BV

ಶ್ರೀನಗರ: ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರನ್ನು ಬಂಧಿಸಲಾಗಿಲ್ಲ ಎಂದು ಕೇಂದ್ರಾಡಳಿತ ಪ್ರದೇಶದ ಚುನಾವಣಾ ಆಯುಕ್ತ ಕೆಕೆ ಶರ್ಮಾ ಸ್ಪಷ್ಟಪಡಿಸಿದ್ದಾರೆ. 

ತಮ್ಮನ್ನು ಮತ್ತೆ ಗೃಹಬಂಧನದಲ್ಲಿರಿಸಲಾಗಿದೆ, ಬಂಧಿಸಲಾಗಿದೆ ಎಂದು ಮೆಹಬೂಬಾ ಮುಫ್ತಿ ಅವರು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಚುನಾವಣಾ ಆಯುಕ್ತ ಕೆಕೆ ಶರ್ಮಾ, ಮೆಹಬೂಬಾ ಮುಫ್ತಿ ಅವರನ್ನು ಬಂಧಿಸಲಾಗಿಲ್ಲ. ಅವರು ಪುಲ್ವಾಮಕ್ಕೆ ತೆರಳುವವರಿದ್ದರು. ಆದರೆ ಭದ್ರತಾ ದೃಷ್ಟಿಯಿಂದ ಪುಲ್ವಾಮಗೆ ತೆರಳಬೇಡಿ ಎಂದಷ್ಟೇ ಸಲಹೆ ನೀಡಲಾಗಿದೆ ಎಂದು ಹೇಳಿದ್ದಾರೆ. 

ಎನ್ಐಎ ವಶಕ್ಕೆ ಪಡೆದಿರುವ ಪಿಡಿಪಿ ನಾಯಕ ವಾಹೀದ್ ಪರ್ರಾ ಅವರ ಪುಲ್ವಾಮದಲ್ಲಿರುವ ನಿವಾಸಕ್ಕೆ ಮೆಹಬೂಬಾ ಮುಫ್ತಿ ಭೇಟಿ ನೀಡುವವರಿದ್ದರು. ಆದರೆ ಇದಕ್ಕೆ ಅವಕಾಶ ನೀಡಲಾಗಿಲ್ಲ. 

ನ.27 ರಂದು ಮೆಹಬೂಬಾ ಮುಫ್ತಿ ಅವರು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುವುದಕ್ಕೆ ಅಧಿಕಾರಿಗಳು ಅವಕಾಶ ನೀಡಿಲ್ಲ ಎಂದು ಮೆಹಬೂಬಾ ಮುಫ್ತಿ ಆರೋಪಿಸಿದ್ದರು. 

SCROLL FOR NEXT