ಉದ್ಧವ್ ಠಾಕ್ರೆ 
ದೇಶ

ನಮ್ಮ ಸರ್ಕಾರವನ್ನು ಇಡಿ, ಸಿಬಿಐ ತನಿಖೆಗಳಿಂದ ಬೆದರಿಸಲು ಸಾಧ್ಯವಿಲ್ಲ: ಉದ್ಧವ್ ಠಾಕ್ರೆ 

ಬಿಜೆಪಿ ಹಗೆತನದ ರಾಜಕೀಯದಲ್ಲಿ ತೊಡಗಿದ್ದು, ಮಹಾ ವಿಕಾಸ ಅಘಡಿ(ಎಂವಿಎ) ಸರ್ಕಾರ ಜಾರಿ ನಿರ್ದೇಶನಾಲಯ, ಸಿಬಿಐಯಂತಹ ತನಿಖೆಗಳಿಂದ ಬೆದರಿಸಲು ಸಾಧ್ಯವಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಮುಂಬೈ: ಬಿಜೆಪಿ ಹಗೆತನದ ರಾಜಕೀಯದಲ್ಲಿ ತೊಡಗಿದ್ದು, ಮಹಾ ವಿಕಾಸ ಅಘಡಿ(ಎಂವಿಎ) ಸರ್ಕಾರವನ್ನು ಜಾರಿ ನಿರ್ದೇಶನಾಲಯ, ಸಿಬಿಐಯಂತಹ ತನಿಖೆಗಳಿಂದ ಬೆದರಿಸಲು ಸಾಧ್ಯವಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಶಿವಸೇನಾ ಸಂಸದ ಸಂಜಯ್ ರಾವತ್ ಅವರಿಗೆ ಸಂದರ್ಶನ ನೀಡಿ ಮಾತನಾಡಿದ ಅವರು, ಸರ್ಕಾರಕ್ಕೆ ಜನರ ಆಶೀರ್ವಾದವಿದೆ. ಸರ್ಕಾರವನ್ನು ಇಡಿ, ಸಿಬಿಐಯಂತಹ ತನಿಖೆಗಳಿಂದ ಬೆದರಿಸಲು, ಕುಗ್ಗಿಸುವಂತಹ ಕೀಳು ರಾಜಕೀಯವನ್ನು ತೋರಿಸುವ ಅಗತ್ಯವಿಲ್ಲ ಎಂದು ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ಮಹಾರಾಷ್ಟ್ರ ಸರ್ಕಾರ ಒಂದು ವರ್ಷದ ಆಡಳಿತ ಪೂರೈಸಿದ್ದು ಈ ಸಂದರ್ಭದಲ್ಲಿ ಶಿವಸೇನೆ ಮುಖವಾಣಿ ಸಾಮ್ನಾಗೆ ನೀಡಿರುವ ಸಂದರ್ಶನದಲ್ಲಿ ಹಲವು ವಿಷಯಗಳ ಕುರಿತು ಮಾತನಾಡಿದ್ದಾರೆ. 

ದ್ವೇಷ ರಾಜಕೀಯಕ್ಕೆ ಕೊನೆಯೇ ಇಲ್ಲದಂತಾಗಿದೆ. ಹಗೆ ರಾಜಕೀಯದ ದಾರಿ ಹಿಡಿಯುವುದು ನನಗೆ ಇಷ್ಟವಿಲ್ಲ. ಈ ಕೊಳಕು ರಾಜಕೀಯವನ್ನು ನಿಲ್ಲಿಸಿ ಎಂದು ವಿರೋಧ ಪಕ್ಷದ ನಾಯಕರನ್ನು ಉದ್ದೇಶಿಸಿ ಹೇಳಿದರು. 

ಇದೇ ಸಂದರ್ಭದಲ್ಲಿ ಶಿವಸೇನೆ, ಎನ್ ಸಿಪಿ ಮತ್ತು ಕಾಂಗ್ರೆಸ್ ನೇತೃತ್ವದ ತಮ್ಮ ಸರ್ಕಾರ ಪೂರ್ಣ ಆಡಳಿತಾವಧಿಯನ್ನು ಪೂರ್ಣಗೊಳಿಸಲಿದೆ ಎಂಬ ವಿಶ್ವಾಸವನ್ನು ಕೂಡ ವ್ಯಕ್ತಪಡಿಸಿದ್ದಾರೆ. ಅಷ್ಟಕ್ಕೂ ತಮಗೆ ಯಾವ ಸರ್ಕಾರ ಬೇಕು ಎಂದು ಜನತೆ ತೀರ್ಮಾನ ಮಾಡುತ್ತಾರೆ ಎಂದರು. 

ಕೆಲವರು ಮೂರು ಪಕ್ಷಗಳು ಒಂದಾಗಲಿಕ್ಕಿಲ್ಲ, ಒಂದಾದರೂ ಹೆಚ್ಚು ಸಮಯ ಉಳಿಯಲಿಕ್ಕಿಲ್ಲ ಎಂದು ಭಾವಿಸಿದರು. ತಮ್ಮ ಮೂರೂ ಪಕ್ಷಗಳ ಮಹಾ ವಿಕಾಸ ಅಘಡಿ ಸರ್ಕಾರ ಮುಂದುವರಿಯುತ್ತಿದೆ. ಇದು ಇನ್ನೂ ನಾಲ್ಕು ವರ್ಷಗಳ ಕಾಲ ಆಡಳಿತ ನಡೆಸಲಿದೆ ಎಂದರು. 

ಇತ್ತೀಚೆಗೆ ಶಿವಸೇನೆ ಸಂಸದ ಪ್ರತಾಪ್ ಸರ್ನೈಕ್ ಅವರ ಮನೆ ಮತ್ತು ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು. ಅಕ್ರಮ ಹಣ ವರ್ಗಾವಣೆ ಕೇಸಿಗೆ ಸಂಬಂಧಿಸಿದಂತೆ ನಡೆದ ದಾಳಿಯಿದು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ವಿಜಯೇಂದ್ರ ಮಾತನ್ನು ನಂಬುತ್ತೇನೆ, ಆದ್ರೆ...: BJPಗೆ ಘರ್ ವಾಪ್ಸಿ ಬಗ್ಗೆ ಈಶ್ವರಪ್ಪ ಶಾಕಿಂಗ್ ಹೇಳಿಕೆ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ